ಯಲ್ಲಾಪುರ: ಕಿಟಕಿಯ ಗ್ರಿಲ್ಸ್ ತೆರವುಗೊಳಿಸಿ ಪಟ್ಟಣದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಶಾಖೆಯಲ್ಲಿ ಕಳ್ಳತನಕ್ಕೆ ಪ್ರಯತ್ನ ಮಾಡಿರುವ ಘಟನೆ ನಡೆದಿದೆ. ಹೌದು, ಕಟ್ಟಡದ ಕಿಟಕಿಯ ಗ್ರಿಲ್ಸ್ ತೆರವುಗೊಳಿಸಿ ಓರ್ವ ಕಳ್ಳ ಒಳಗೆ ಬಂದಿರುವ ಚಿತ್ರಣ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸೇಫ್ ಲಾಕರ್‌ನ್ನು ಮುರಿಯಲು ಪ್ರಯತ್ನಿಸಿದ್ದಾನೆ. ಬೆಳಗ್ಗೆ ಬ್ಯಾಂಕ್‌ನ ಸಿಬ್ಬಂದಿಗಳು ಬಾಗಿಲು ತೆರೆದು ಒಳತೆರಳುತ್ತಿದ್ದಂತೆ ಕಿಟಕಿ ತೆರೆದಿರುವುದನ್ನು ಗಮನಿಸಿ ಪೊಲೀಸರಿಗೆ ತಿಳಿಸಿರುತ್ತಾರೆ.
ಸ್ಥಳಕ್ಕಾಗಮಿಸಿದ ಪೊಲೀಸರು ಸಿಸಿಟಿವಿ ಪರೀಕ್ಷಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಾಥಮಿಕ ತನಿಖೆಗಳಿಂದ ಯಾವುದೇ ಕಳ್ಳತನ ಆಗದಿರುವುದು ತಿಳಿದು ಬಂದಿದೆ. ಫಾರೆನ್ಸಿಕ್ ತಂಡವು ಸ್ಥಳ ಪರಿಶೀಲನೆ ನಡೆಸಿ, ಲಭ್ಯವಿದ್ದ ಬೆರಳಚ್ಚುಗಳ ಮಾಹಿತಿಯನ್ನು ಸಂಗ್ರಹಿಸಿದೆ.
ರಾತ್ರಿ ಪಾಳಿಯಲ್ಲಿ ಸೆಕ್ಯೂರಿಟಿ ಗೌರ್ಡ್ ಸಹ ಇಲ್ಲದಿರುವುದು ಬ್ಯಾಂಕ್ ಭದ್ರತೆಯನ್ನು ಪ್ರಶ್ನಿಸುವಂತಾಗಿದೆ. ಸದ್ಯದ ತನಿಖೆಗಾಗಿ ಅಕ್ಕಪಕ್ಕದ ಅಂಗಡಿಗಳ ಹಾಗೂ ಇತರೆ ಲಭ್ಯವಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದು, ಕಳ್ಳನನ್ನು ಹಿಡಿಯಲು ಕಾರ್ಯಪ್ರವತ್ತರಾಗಿದ್ದಾರೆ.
ವಿಸ್ಮಯ ನ್ಯೂಸ್, ಕಾರವಾರ
ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ