Follow Us On

WhatsApp Group
Important
Trending

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು: ಚಾಲಕ ಸ್ಥಳದಲ್ಲೇ ಸಾವು

ಕಾರವಾರ: ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ದೇವಳಮಕ್ಕಿ ಗ್ರಾಪಂ ವ್ಯಾಪ್ತಿಯ ಬರ್ಗಲ್ ಬಳಿ ಶನಿವಾರ ನಡೆದಿದೆ. ಮೃತ ಪಟ್ಟ ವ್ಯಕ್ತಿಯನ್ನು ಖಾರ್ಗೇಜೂಗಾದ ರೋಷನ್ ನಾಯ್ಕ ಎಂದು ತಿಳಿದು ಬಂದಿದೆ. ಕಾರವಾರಕ್ಕೆ ಆಗಮಿಸುತ್ತಿದ್ದಾಗ ಬರ್ಗಲ್ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಅಫಘಾತದಲ್ಲಿ ಕಾರು ಚಾಲಕನಿಗೆ ತಲೆ ಹಾಗೂ ಮುಖದ ಭಾಗಕ್ಕೆ ತೀವ್ರ ಗಾಯವಾಗಿತ್ತು. ಇದರಿಂದ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಕಾರವಾರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button