Important
Trending

ನಾಯಿ ದಾಳಿಗೆ ಸಿಲುಕಿ ಪಟ್ಟಣಕ್ಕೆ ಬಂದ ಕಾಡುಕುರಿ ಸಾವು

ಸಿದ್ದಾಪುರ: ಆಹಾರವನ್ನು ಅರಸಿ ಪಟ್ಟಣಕ್ಕೆ ಬಂದ ಕಾಡುಕುರಿ ಮರಿಯೊಂದು ನಾಯಿ ದಾಳಿಗೆ ತುತ್ತಾಗಿ ಸಾವನ್ನಪ್ಪಿದ ಘಟನೆ ಪಟ್ಟಣದ ಚಂದ್ರಗುತ್ತಿ ಸರ್ಕಲ್ ನಲ್ಲಿ ನಡೆದಿದೆ. ಸುಮಾರು ಎರಡರಿಂದ ಎರಡುವರೆ ವರ್ಷ ಪ್ರಾಯದ ಕಾಡು ಕುರಿಮರಿ ಇದಾಗಿರಬಹುದೆಂದು ಅಂದಾಜಿಸಲಾಗಿದೆ.

ಕಾಡಿನಿಂದ ಬಂದು ಗಾಬರಿಗೊಂಡು ಓಡುತ್ತಿರುವಾಗ ನಾಯಿಗಳು ಬೆನ್ನಟ್ಟಿದ ಪರಿಣಾಮ ತಪ್ಪಿಸಿಕೊಳ್ಳಲು ಆಗದೆ ನಾಯಿಯ ಬಾಯಿಗೆ ಸಿಲುಕಿ ಮೃತಪಟ್ಟಿದೆ ಎನ್ನಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದು ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ನಡೆಸಿ ಇಲಾಖೆಯ ನಿಯಮದಂತೆ ಮುಂದಿನ ಕ್ರಮ ಕೈಗೊಂಡಿದ್ದಾರೆ.

ವಿಸ್ಮಯ ನ್ಯೂಸ್, ದಿವಾಕರ ಸಂಪಖoಡ, ಸಿದ್ದಾಪುರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button