ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಹರಿದ ಲಾರಿ: ಪಾದಚಾರಿ ಸಾವು: ಲಾರಿ ಬಿಟ್ಟು ಪರಾರಿಯಾದ ಚಾಲಕ
ಹೊನ್ನಾವರ: ಪಟ್ಟಣದ ಗೇರುಸೊಪ್ಪಾ ವೃತ್ತದ ಬಳಿ ಲಾರಿ ಚಾಲಕನ ಅಜಾಗರುಕತೆಯ ಚಾಲನೆಯಿಂದ ಪಾದಚಾರಿಯೊಬ್ಬ ಮೃತಪಟ್ಟ ಘಟನೆ ನಡೆದಿದೆ. ಹೊನ್ನಾವರ ಕಡೆಯಿಂದ ಕುಮಟಾ ಕಡೆಗೆ ಅತಿವೇಗದಿಂದ ಲಾರಿ ಚಲಾಯಿಸಿಕೊಂಡು ಬಂದ ಚಾಲಕನು, ಪಟ್ಟಣದ ಚರ್ಚರೋಡ್ ನಿವಾಸಿಯಾದ ಸುಬ್ರಾಯ ಮಂಜು ಅಂಬಿಗ ಇವರ ತಲೆಯ ಮೇಲೆ ಲಾರಿ ಹರಿಸಿದ ಪರಿಣಾಮ ಸ್ಥಳದಲ್ಲೆ ವ್ಯಕ್ತಿ ಸಾವನ್ನಪ್ಪಿದ್ದಾನೆ.
ಲಾರಿಯು ಕೆ.ಎ. 29 ಡಬ್ಲ್ಯು 7814 ನೊಂದಣೆ ಹೊಂದಿದ್ದು, ಚಾಲಕನು ಲಾರಿಯನ್ನು ಸ್ಥಳದಲ್ಲೆ ಬಿಟ್ಟು ಪರಾರಿಯಾಗಿದ್ದಾನೆ. ಈ ಸಂಭದ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ
ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ