ಒಂದೇ ದಿನ ಜಿಲ್ಲೆಯ ಇಬ್ಬರು ಪಿಎಸ್ಐ ಗಳಿಗೆ ಕೂಡಿ ಬಂದ ಕಂಕಣ ಬಲ : ಅರ್ಪಿತಾ ಕೈ ಹಿಡಿದ ಪ್ರವೀಣ : ಸುಕನ್ಯಾಳನ್ನು ವರಿಸಿದ ಸಿದ್ದು ಗುಡಿ

ಅಂಕೋಲಾ: ಅಂಕೋಲಾ ಪೊಲೀಸ್ ಠಾಣೆಯ ಸಬ್ ಇನ್ಸಪೆಕ್ಟರ್ ಪ್ರವಿಣಕುಮಾರ್ ಆರ್. ಅವರ ವಿವಾಹವು ಅರ್ಪಿತಾ ಎನ್. ಎಸ್ ಅವರೊಂದಿಗೆ ರವಿವಾರ ಶಿವಮೊಗ್ಗದ ಆರ್ಯ ಈಡಿಗ ಕಲ್ಯಾಣ ಮಂಟಪದಲ್ಲಿ ಸಂಭ್ರಮದಿಂದ ನಡೆಯಿತು. ಕುಟುಂಬ ವರ್ಗದವರು, ಬಂಧು ಬಳಗ, ಹಿತೈಷಿಗಳು, ಆರಕ್ಷಕ ಇಲಾಖೆಯ ಸಿಬ್ಬಂದಿಗಳು ಸೇರಿದಂತೆ ಹಲವರು  ವಿವಾಹ ಮಹೋತ್ಸವದಲ್ಲಿ ಪಾಲ್ಗೊಂಡು ನವ ದಂಪತಿಗಳಿಗೆ ಶುಭ ಹಾರೈಸಿದರು.

ಈ ಹಿಂದೆ ಅಂಕೋಲಾ ಠಾಣೆಯಲ್ಲಿ ಪ್ರೊಬೆಷನರಿ ಪಿಎಸ್ಐ ಆಗಿ ಕಾರ್ಯನಿರ್ವಹಿಸಿ, ಪ್ರಸ್ತುತ ಕಾರವಾರ  ತಾಲೂಕಿನ ಮಲ್ಲಾಪುರ ಪೊಲೀಸ್ ಠಾಣೆಯ ಪಿ.ಎಸ್.ಐ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಸಿದ್ದು ಗುಡಿ ಅವರು ಜಮಖಂಡಿಯಲ್ಲಿ ಸುಖನ್ಯಾ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿರಿಸಿದರು.ಉತ್ತರ ಕನ್ನಡ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಈರ್ವರು ಪೋಲಿಸ್ ಅಧಿಕಾರಿಗಳು ಭಾನುವಾರ ತಮ್ಮ ತಮ್ಮ ಊರುಗಳಲ್ಲಿ ಸಪ್ತಪದಿ ತುಳಿದಿದ್ದು,ಇಲಾಖೆಯ ಹಿರಿಯ ಅಧಿಕಾರಿಗಳು, ಗಣ್ಯರು ಶುಭಕೋರಿದ್ದಾರೆ.               

ವಿಸ್ಮಯ ನ್ಯೂಸ್ ವಿಲಾಸ  ನಾಯಕ ಅಂಕೋಲಾ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Exit mobile version