ಶಾಲೆಯಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕಳ್ಳತನ : ಓರ್ವನ ಬಂಧನ: ಇನ್ನಿಬ್ಬರಿಗಾಗಿ ಶೋಧ

ಕುಮಟಾ: ತಾಲೂಕಿನ ಬರ್ಗಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ1 ರಲ್ಲಿ ಇತ್ತಿಚೆಗೆ ಅಳವಡಿಸಿದ್ದ ಸಿ.ಸಿ. ಟಿವಿ ಕ್ಯಾಮೆರಾ ಕದ್ದೊಯ್ದ ಪ್ರಕರಣವನ್ನು ಪೊಲೀಸರು ಬೇಧಿಸಿದ್ದು, ಓರ್ವ ಯುವಕನನ್ನು ಬಂಧಿಸುವಲ್ಲಿ ಗೋಕರ್ಣ ಪೊಲೀಸರು ಯಶಸ್ವಿಯಾಗಿದ್ದಾರೆ. ತಾಲೂಕಿನ ಬರ್ಗಿ ಸಮೀಪದ ಕುರಿಗದ್ದೆಯ ಮನೋಜ ಗಣೇಶ ಪಟಗಾರ (19) ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ಇನ್ನಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

ಕಳ್ಳತನ ಪ್ರಕರಣ ದಾಖಲಿಸಿಕೊಂಡ ಗೋಕರ್ಣ ಠಾಣೆ ಪೊಲೀಸರು ತನಿಖೆ ಕೈಗೊಂಡು ಪೇಂಟಿAಗ್ ಕೆಲಸ ಮಾಡುತ್ತಿದ್ದ ಕುರಿಗದ್ದೆಯ ಮನೋಜ ಪಟಗಾರ ಅವರನ್ನು ಬಂಧಿಸಿ, ಸಿ.ಸಿ ಕ್ಯಾಮೆರಾಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ವಿಸ್ಮಯ ನ್ಯೂಸ್, ಕುಮಟಾ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ

Exit mobile version