ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆ ಸಾಧ್ಯತೆ: ನಾಳೆ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ ಮುನ್ಸೂಚನೆಯಲ್ಲಿ ಏನಿದೆ?

ಕಾರವಾರ: ಒಂದೆರಡು ದಿನಗಳ ಕಾಲ ಬಿಡುವು ನೀಡಿದ್ದ ಮಳೆರಾಯನ ಆರ್ಭಟ ಮತ್ತೆ ಶುರುವಾದಂತಾಗಿದೆ. ಲಕ್ಷದ್ವೀಪದಲ್ಲಿ ಸುಳಿಗಾಳಿ ಪರಿಣಾಮ ಹಾಗೂ ಅರಬ್ಬಿ ಸಮುದ್ರದಿಂದ ಪಶ್ಚಿಮ ಕರಾವಳಿಗೆ ತೇವಾಂಶ ತುಂಬಿದ ಗಾಳಿಯು ವೇಗವಾಗಿ ಬೀಸುತ್ತಿರುವ ಕಾರಣದಿಂದಾಗಿ ರಾಜ್ಯದಲ್ಲಿ ಮುಂದಿನ 4 ರಿಂದ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಕರಾವಳಿಯಲ್ಲಿ ಮೇ 17, 19 ಮತ್ತು 20, 21 ರಂದು ಎಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಮೇ 18 ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಿಸಿದ್ದು, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. ಈ ಮಧ್ಯೆ ನೈರುತ್ಯ ಮಾನ್ಸೂನ್ ಅಂಡಮಾನ್-ನಿಕೋಬಾರ್ ದ್ವೀಪಗಳಿಗೆ ಸೋಮವಾರ ಎಂಟ್ರಿಕೊಟ್ಟಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಹೀಗಾಗಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿಯೂ ಮಳೆಯಾಗುತ್ತಿದೆ ಎಂದು ತಿಳಿಸಿದೆ. ಇಂದಿನಿoದ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದ್ದು ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಹಾಗೂ ರೆಡ್ ಅಲರ್ಟ್ ಘೋಷಿಸಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಇಂದು ಆರಂಜ್ ಅಲರ್ಟ್ ಘೋಷಿಸಲಾಗಿದೆ. ಮೇ 18 ರಂದು ಕರಾವಳಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆಮಾಡಲಾಗಿದೆ. ಮೇ 19 ರಂದು ಸಹ ಆರೆಂಜ್ ಅಲರ್ಟ್ ಇರಲಿದೆ. ಮೇ 20 ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದು ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಂ

ಬ್ಯುರೋ ರಿಪೋರ್ಟ್, ವಿಸ್ಮಯ ನ್ಯೂಸ್.

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ

Exit mobile version