ಭಾರೀ ಮಳೆಯಿಂದಾಗಿ ತಗ್ಗುಪ್ರದೇಶಕ್ಕೆ ನುಗ್ಗಿದ ನೀರು: ಭಟ್ಕಳದಲ್ಲಿ ಹಲವು ರಸ್ತೆಗಳು ಜಲಾವೃತ

ಭಟ್ಕಳ: ಆಸಾನಿ ಚಂಡ ಮಾರುತದ ಪ್ರಭಾವ ಭಟ್ಕಳದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡು ರಸ್ತೆ ಎಲ್ಲೆಡೆ ನೀರು ಹರಿದು ವಾಹನ ಸಂಚಾರರಿಗೆ ತೀವ್ರ ತೊಂದರೆ ಉಂಟಾಗಿದೆ. ಭಾರಿ ಮಳೆಯಿಂದಾಗಿ ನಗರ ಸೇರಿದಂತೆ ಗ್ರಾಮಾಂತರ ಪ್ರದೇಶಗಳಲ್ಲಿ ಮಳೆಯಿಂದಾಗಿ ಜನ ಮನೆಗಳಿಂದ ಹೊರಗೆ ಬರದಂತಾಗಿದ್ದು, ತಾಲೂಕಿನ ಎಡೆ ಬಿಡದೆ ಮಳೆಯಾಗುತ್ತಿದೆ.

ಕೆಲಕಾಲ ಮಳೆ ಕಡಿಮೆಯಾಗಿತೆನ್ನುವಷ್ಟರಲ್ಲಿ ಮತ್ತೆ ತನ್ನ ಆರ್ಭಟ ಶುರುವಿಟ್ಟುಕೊಳ್ಳುತ್ತಾ ದಿನವಿಡಿ ಜನರ ಓಡಾಟಕ್ಕೆ ಮಳೆ ಕಡಿವಾಣ ಹಾಕಿದೆ. ಭಾರಿ ಮಳೆಗೆಜನ ಜೀವನ ಅಸ್ತವ್ಯಸ್ತಗೊಂಡಿದ್ದು ಪ್ರಮುಖ ರಸ್ತೆಗಳಲ್ಲಿ ನೀರಿನಿಂದಾವೃತಗೊoಡಿದ್ದವು. ಇಲ್ಲಿನ ಪಟ್ಟಣದ ಮುಖ್ಯ ಪೇಟೆ ರಸ್ತೆ ,ಮಾರಿಗುಡಿ ರಸ್ತೆಗಳ ತುಂಬೆಲ್ಲ ನೀರು ನಿಂತಿದ್ದು ವಾಹನ ಸಂಚಾರಕ್ಕೆ ತೊಡಕಾಗಿತ್ತು. ಇಲ್ಲಿನ ಸಂಶುದ್ದೀನ್ ಸರ್ಕಲ್ ಪ್ರತಿ ವರ್ಷ ಸುರಿಯವ ಭಾರಿ ಮಳೆಗೆ ಹರಕೆಯಂತೆ ಗಟಾರ ವ್ಯವಸ್ಥೆ ಸರಿಯಿಲ್ಲದ ಕಾರಣ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು ಇದರಿಂದಾಗಿ ವಾಹನ ಸವಾರರಿಗೆ ತೊಂದರೆ ಉಂಟಾಗಿದೆ.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ

Exit mobile version