ಭಟ್ಕಳ:ಅಕ್ರಮವಾಗಿ ವಾಹನವೊಂದರಲ್ಲಿ ದನದ ಮಾಂಸ ಸಾಗಾಟ ಮಾಡುತ್ತಿರುವ ವೇಳೆ ಶಿರಾಲಿ ಚೆಕ್ ಪೋಸ್ಟ್ ನಲ್ಲಿ ವಾಹನ ತಡೆದು ಓರ್ವನನ್ನು ಬಂದಿಸಿದ್ದು ಇನ್ನೋರ್ವ ಪರಾರಿಯಾಗಿದ್ದಾನೆ.
ಆರೋಪಿಯನ್ನಾಗಿ ಸಯ್ಯದ್ ಮೋಹಿದೀನ್ ಅಲಿ
ಗಜಬರ್ ಸಮೀರ್ , ಇಬ್ರಾಹಿಂ ಮುಹಮ್ಮದ್ ಹುಸೇನ್, ನಾಸೀರ್ ಎಂದು ತಿಳಿದು ಬಂದಿದೆ. ಇವರೆಲ್ಲ ಎಲ್ಲಿಯೋ ಜಾನುವಾರುಗಳನ್ನು ವಧೆ ಮಾಡಿ ಕಪ್ಪು ಬಣ್ಣದ ಟೊಯೋಟಾ ಇಟೋಯೀಸ್ ವಾಹನದಲ್ಲಿ ಸುಮಾರು 80 ಸಾವಿರ ಮೌಲ್ಯದ 400 ಕೆಜಿ ಆಗುವಷ್ಟು ದನದ ಮಾಂಸವನ್ನು ಮಾರಾಟ ಮಾಡುವ ಉದ್ದೇಶದಿಂದ ಸಾಗಿಸುತ್ತಿದ್ದರು.
ಸಕ್ಷಮ ಪ್ರಾಧಿಕಾರದಿಂದ ಸಾಗಾಟ ಮಾಡಲು ಪರವಾನಿಗೆ ಪಡೆಯದೇ ವಾಹನದಲ್ಲಿ ಸಾಗಾಟ ಮಾಡುತ್ತಿದ್ದಾಗ ಶಿರಾಲಿ ಚೆಕ್ ಪೋಸ್ಟ್ ನಲ್ಲಿ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದು ಈ ವೇಳೆ ಓರ್ವ ಆರೋಪಿ ಪೊಲೀಸ ಕೈಗೆ ಸಿಕ್ಕಿ ಬಿದ್ದಿದ್ದು ಇನ್ನೋರ್ವ ಪರಾರಿಯಾಗಿದ್ದು ಇನ್ನಿಬ್ಬರು ಆರೋಪಿಗಳನ್ನು ಬಂಧಿಸಬೇಕಾಗಿದೆ. ಈ ಕುರಿತು ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಸ್ಮಯ ನ್ಯೂಸ್ ಉದಯ ಎಸ್ ನಾಯ್ಕ ಭಟ್ಕಳ
ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ