ಮದುವೆಗೆ ತೆರಳುತ್ತಿದ್ದ ವೇಳೆ ಮರಕ್ಕೆ ಡಿಕ್ಕಿ ಹೊಡೆದ ಕಾರು: ಮಗು ಸ್ಥಳದಲ್ಲೇ ಸಾವು

ಯಲ್ಲಾಪುರ: ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮಗು ಸ್ಥಳದಲ್ಲೇ ಮೃತಪಟ್ಟ ಹೃದಯ ವಿದ್ರಾವಕ ಘಟನೆ ತಾಲೂಕಿನಲ್ಲಿ‌ ನಡೆದಿದೆ.

ಯಲ್ಲಾಪುರ ಶಿರಸಿ ರಾಜ್ಯ ಹೆದ್ದಾರಿ 93ರ ಮಳಲಗಾಮ್ ಶಾಲೆಯ ಸಮೀಪ ಅಪಾಯಕಾರಿ ತಿರುವಿನಲ್ಲಿ ಈ ದುರ್ಘಟನೆ ಸಂಭವಿಸಿದೆ. ಮೂರು ವರ್ಷದ ಮಗು ಸುಯೋಗ ಹೆಗಡೆ ಸ್ಥಳದಲ್ಲಿ ಮೃತಪಟ್ಟಿದೆ.

ಸಾಗರ ಮಹಾಬಲೇಶ್ವರ ಹೆಗಡೆ ಹಾಗೂ ನವ್ಯಾ ಹೆಗಡೆ ಗಾಯಗೊಂಡಿದ್ದು, ಗಾಯಾಳುಗಳನ್ನು ಹುಬ್ಬಳ್ಳಿ ಎಸ್.ಡಿ.ಎಂ ಆಸ್ಪತ್ರೆಗೆ ಸೇರಿಸಲಾಗಿದೆ. ಕಾರು ಯಲ್ಲಾಪುರದಿಂದ ಮಂಚಿಕೇರಿ ಕಡೆಗೆ ಮದುವೆಗೆ ಹೊರಟ್ಟಿದ್ದ ವೇಳೆ ಮಳಲಗಾಮ್ ಬಳಿ ನಿಯಂತ್ರಣ ತಪ್ಪಿ ಮರಕ್ಕೆಡಿಕ್ಕಿ ಹೊಡೆದಿದೆ. ಕಾರು ಜಖಂಗೊಂಡಿದೆ.

ವಿಸ್ಮಯ ನ್ಯೂಸ್ ಕಾರವಾರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ

Exit mobile version