ತ್ರಿವೇಂದ್ರಮ್ ನಲ್ಲಿ ಇತ್ತಿಚೆಗೆ ನಡೆದ ನಾಲ್ಕನೇ ನ್ಯಾಷನಲ್ ಮಾಸ್ಟರ್ಸ್ ಗೇಮ್ಸ್ ನಲ್ಲಿ ಉತ್ತರಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಕಾರ್ಗೋಲಿಯ ಬಿನ್ಸಿ ಜೋಸೆಫ್ ಅವರು ಎರಡು ಚಿನ್ನದ ಪದಕ ಮತ್ತು ಒಂದು ಬೆಳ್ಳಿ ಪದಕ ಪಡೆದು, ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ. 30+ ಕೆ.ಜಿ ವಿಭಾಗದಲ್ಲಿ ಜಾವೆಲಿನ್ ಥ್ರೋ ಮತ್ತು ಹೈ ಜಂಪ್ ನಲ್ಲಿ ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ. ಇನ್ನು ತ್ರಿಪಲ್ ಜಂಪ್ ನಲ್ಲಿ ಬೆಳ್ಳಿಯ ಪದಕಕ್ಕೆ ಕೊರಳೊಡ್ಡಿದ್ದಾರೆ. ಬಿನ್ಸಿ ಜೋಸೆಫ್ ಅವರು ದೈಹಿಕ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದು,ರಾಷ್ಟ್ರೀಯ ಕಬಡ್ಡಿ ಆಟಗಾರ್ತಿಯಾಗಿಯೂ ಗುರುತಿಸಿಕೊಂಡಿದ್ದಾರೆ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್