Follow Us On

WhatsApp Group
Important
Trending

ಕಲ್ಗಾ ತೆಗೆಯುತ್ತಿರುವಾಗ ಆಕಸ್ಮಿಕವಾಗಿ ಬಿದ್ದು ಮಹಿಳೆ ಸಾವು

ಗೋಕರ್ಣ: ಕಲ್ಗಾ ತೆಗೆಯುತ್ತಿರುವಾಗ ಆಕಸ್ಮಿಕವಾಗಿ ಬಿದ್ದು ಮಹಿಳೆಯೋರ್ವಳು ಮೃತಪಟ್ಟ ಘಟನೆ ಇಲ್ಲಿನ ಸಿದ್ದೇಶ್ವರ ಗಜನಿಯಲ್ಲಿ ನಡೆದಿದೆ. ತೊರೆಗದ್ದೆ ಮೂಲದ ದೇವಕಿ ಹರಿಂಕತ್ರ ಮೃತ ಮಹಿಳೆ ಎಂದು ತಿಳಿದುಬಂದಿದೆ.

ಮೃತ ಮಹಿಳೆ ನದಿಯಿಂದ ಕಲ್ಗಾವನ್ನು ತೆಗೆದು ಮಾರಾಟ ಮಾಡಿ ಜೀವನ ನಡೆಸುತ್ತಿದ್ದಳು. ಅದೇ ರೀತಿ ಕಲ್ಗಾ ತೆಗೆಯಲು ತೆರಳಿದವಳು ಸಂಜೆಯಾದರೂ ಮನೆಗೆ ಬಾರದೇ ಇರುವುದರಿಂದ ಸ್ಥಳೀಯರು ಹುಡುಕಾಟ ನಡೆಸಿದಾಗ ಮೃತಪಟ್ಟಿರುವುದು ತಿಳಿದುಬಂದಿದೆ. ಸ್ಥಳಕ್ಕೆ ಗೋಕರ್ಣ ಪೊಲೀಸರು ಭೇಟಿ ನೀಡಿ ಮಾಹಿತಿ ಕಲೆಹಾಕಿದ್ದಾರೆ.

ವಿಸ್ಮಯ ನ್ಯೂಸ್ ಕುಮಟಾ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button