ನದಿಯಲ್ಲಿ ಬಿದ್ದು ಮೃತಪಟ್ಟ ಮೀನುಗಾರ:  ನಾಡ ದೋಣಿಯಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ನಡೆದ ದುರ್ಘಟನೆ 

ಅಂಕೋಲಾ: ಗಂಗಾವಳಿ ನದಿಯಲ್ಲಿ ಸಾಂಪ್ರದಾಯಿಕ ಮೀನುಗಾರಿಕೆ ನಡೆಸುತ್ತಿದ್ದ ಮೀನುಗಾರನೋರ್ವ ನದಿ ನೀರಿಗೆ ಬಿದ್ದು ಮೃತ ಪಟ್ಟ ಘಟನೆ ಸಗಡಗೇರಿಯಲ್ಲಿ ನಡೆದಿದೆ. ಸಗಡಗೇರಿ ಅಂಬಿಗರಕೊಪ್ಪದ ನಿವಾಸಿ ಸೀತಾರಾಮ ಗೋವಿಂದ ಅಂಬಿಗ (37) ಮೃತ ದುರ್ದೈವಿ ಯಾಗಿದ್ದು ಈತ ಸಗಡಗೇರಿ ಗ್ರಾಮದಲ್ಲಿ ಗಂಗಾವಳಿ ನದಿಯಲ್ಲಿ ನಾಡ ದೋಣಿಯಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಸಂದರ್ಭದಲ್ಲಿ ಬಲೆ ಎಳೆಯುತ್ತಿದ್ದಾಗ  ಎದೆನೋವು  ಅಥವಾ ಇನ್ನಿತರ ಕಾರಣಗಳಿಂದ ನೀರಿನಲ್ಲಿ ಬಿದ್ದು ಮುಳುಗಿ ಮೃತ ಪಟ್ಟಿರುವುದಾಗಿ ಸತೀಶ ಅಂಬಿಗ ಎನ್ನುವವರು ಪೋಲೀಸ್ ದೂರು ನೀಡಿದ್ದರು. 

ಗೋವಿಂದನ ಮೃತ ದೇಹವನ್ನು ಅಂಕೋಲಾ ಸರ್ಕಾರಿ ಆಸ್ಪತ್ರೆ ಶವಾಗಾರಕ್ಕೆ ತಂದು ಪರೀಕ್ಷೆ ನಡೆಸಲಾಗಿದ್ದು ಈ ಕುರಿತು ಅಂಕೋಲಾ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Exit mobile version