Important
Trending

ಸಿ. ಆರ್. ಪಿ ಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಶಿಕ್ಷಕ ಸಸ್ಪೆಂಡ್: ಕೇಳಿಬಂದಿದೆ ಗಂಭೀರ ಆರೋಪ

ಹೊನ್ನಾವರ: ತಾಲೂಕಿನ ಉಪ್ಪೊಣಿ ಉರ್ದು ಸಿ. ಆರ್. ಪಿ ಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಶಿಕ್ಷಕ ನಾಸೀರ್ ಖಾನ್ ರನ್ನು ಕಾರವಾರ ಶೈಕ್ಷಣಿಕ ಜಿಲ್ಲೆಯ ಉಪನಿರ್ದೇಶಕರಾದ ಹರೀಶ ಗಾಂವಕರ ರವರು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ. ಹಾಲಿ ಉಪ್ಪೊಣಿಯ ಉರ್ದು ಸಿ. ಆರ್. ಪಿ ಯಾಗಿ ಕಾರ್ಯ ನಿರ್ವಹಿಸುತ್ತಿದ್ದ ನಾಸೀರ್ ಖಾನ್ ಕಳೆದ ಒಂದು ವರ್ಷದಿಂದ ಸಿ. ಆರ್. ಪಿ ಕರ್ತವ್ಯ ಮರೆತು ಉರ್ದು ಶಾಲೆಯಲ್ಲಿ ಕಾರ್ಯನಿರ್ವಹಿಸುವ ಶಿಕ್ಷಕ, ಶಿಕ್ಷಕಿಯರಿಗೆ ಮಾನಸಿಕ ಹಿಂಸೆ ಹಾಗೂ ದೌರ್ಜನ್ಯ ನಡೆಸುತ್ತ ಬಂದಿದ ್ದಎಂಬ ಆರೋಪದ ಹಿನ್ನಲೆಯಲ್ಲಿ ಈ ಕ್ರಮಕೈಗೊಳ್ಳಲಾಗಿದೆ.

ಶಾಲೆಯಲ್ಲಿ ಕರ್ತವ್ಯ ನಿರ್ವಹಿಸಲು ಉತ್ತಮ ವಾತಾವರಣ ಆಗದಿದ್ದ ರೀತಿಯಲ್ಲಿ ಕುಳಿತು ದಿನವಿಡಿ ಮಾನಸಿಕ ಹಿಂಸೆ ನೀಡುತ್ತಾರೆ ಎಂದು ಉಪ್ಪೊಣಿ ಕ್ಲಸ್ಟರಿನ ಶಿಕ್ಷಕ, ಶಿಕ್ಷಕಿಯರು ಕ್ರಮ ಕೈಗೊಳ್ಳುವಂತೆ ಕ್ಷೇತ್ರ ಶಿಕ್ಷಣಾಧಿಕರಿಯವರಿಗೆ ಮನವಿ ನೀಡಿದ್ದರು. ಈ ಹಿಂದೆಯು ಕೂಡ ಈತ ಸಹಿ.ಪ್ರಾ. ಉರ್ದು ವಲ್ಕಿ ಶಾಲೆಯಲ್ಲಿ ಶಿಕ್ಷಕನಾಗಿ ಕರ್ತವ್ಯ ನಿರ್ವಹಿಸುತ್ತಿರುವಾಗ ಗಂಭೀರ ಆರೋಪಗಳಿಂದ 6 ತಿಂಗಳು ಇಲಾಖೆ ಇಮಾನತ್ತಿನಲ್ಲಿ ಇರಿಸಿತ್ತು.

ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button