ಖಚಿತ ಮಾಹಿತಿ ಮೇರೆಗೆ ದಾಳಿ: ಅಪಾರ ಪ್ರಮಾಣದ ಮದ್ಯ ವಶಕ್ಕೆ

ಕಾರವಾರ: ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳು, ಅಕ್ರಮವಾಗಿ ಮನೆಯಲ್ಲಿ ಸಂಗ್ರಹಿಸಿದ್ದ ಗೋವಾ ಮದ್ಯವನ್ನು ವಶಪಡಿಸಿಕೊಂಡು ಓರ್ವನನ್ನು ವಶಕ್ಕೆ ಪಡೆದಿದ್ದಾರೆ. ನಂದನಗದ್ದಾದ ವಾಗಳೇವಾಡದ ಗೋಪಾಲ ಹರಿಕಂತ್ರ ಆರೋಪಿ ಎಂದು ತಿಳಿದುಬಂದಿದೆ.

ಅಬಕಾರಿ ಅಧಿಕಾರಿಗಳು ದಾಳಿ ಮಾಡಿದಾಗ ಸುಮಾರು 68 ಸಾವಿರ ರೂಪಾಯಿ ಮೌಲ್ಯದ ಮದ್ಯವನ್ನು ಜಪ್ತು ಮಾಡಿಕೊಳ್ಳಲಾಗಿದೆ. ಆರೋಪಿತನನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿ ವಿರುದ್ಧ ಕಾರವಾರ ಉಪವಿಭಾಗದ ಅಬಕಾರಿ ಉಪ ನಿರೀಕ್ಷಕರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಸ್ಮಯ ನ್ಯೂಸ್, ಕಾರವಾರ

Exit mobile version