ಮದಿರೆ ಮತ್ತಿನಲ್ಲಿ ವಾಹನ ಚಲಿಸುತ್ತಿದ್ದವರಿಗೆ ಬಿಸಿ ಮುಟ್ಟಿಸಿದ ಪೊಲೀಸರು

ಶಿರಸಿ: ನಗರದಲ್ಲಿ ಮಧ್ಯಪಾನ ಮಾಡಿ ಅಪಘಾತ ಪಡಿಸುತ್ತೀರುವವರ ಸಂಖ್ಯೆ ಹೆಚ್ಚುತ್ತೀರುವ ಹಿನ್ನೆಲೆಯಲ್ಲಿ ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಶಿರಸಿ ಪೊಲೀಸರು ಕಾರ್ಯಾಚರಣೆ ನಡೆಸಿ ಮಧ್ಯಪಾನ ಮಾಡಿ ವಾಹನ ಚಲಾಯಿಸುವ ವಾಹನ ಸವಾರಿಗೆ ಬಿಸಿ ಮುಟ್ಟಿಸಿದ್ದಾರೆ. ನಗರದ ನಿಲೇಕಣಿ, ಕೊಟೆಕೆರೆ , ಹುಬ್ಬಳ್ಳಿ ರಸ್ತೆ,ಅಂಚೆ ವೃತ್ತ, ಅಶ್ವಿನಿ ವೃತ್ತ ಸೇರಿದಂತೆ ಹಲವು ಕಡೆ ಏಕಾಏಕಿ ಕಾರ್ಯಾಚರಣೆ ಗಿಳಿದ  ಪೊಲೀಸರು  ಸುಮಾರು 10ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿದ್ದಾರೆ.  

ಮಧ್ಯಪಾನ ಮಾಡಿ ವಾಹನ ಚಾಲಾಯಿಸಿದರೆ ನ್ಯಾಯಾಲಯದಲ್ಲಿ ಹತ್ತು ಸಾವಿರ ರೂಪಾಯಿ ದಂಡ ಪಾವತಿಸಿ ವಾಹನ ವನ್ನು ಬಿಡಿಸಿಕೊಳ್ಳುವ ಅನಿವಾರ್ಯತೆ ಇದ್ದು  ಇತ್ತೀಚಿನ ದಿನಗಳಲ್ಲಿ ಕುಡಿದು ವಾಹನ ಚಾಲನೆ ಮಾಡುವವರ ಸಂಖ್ಯೆ ಹೆಚ್ಚಾಗಿದ್ದು ಈ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆದಿದೆ ಎಂದು ಹೇಳಲಾಗಿದೆ.

ಈ ಕಾರ್ಯಾಚರಣೆ ಯು ಡಿವೈಎಸ್ಪಿ ರವಿ ನಾಯ್ಕ ಮಾರ್ಗದರ್ಶನ ದಲ್ಲಿ ಸಿಪಿಐ ರಾಮಚಂದ್ರ ನಾಯಕ್ ನೇತೃತ್ವದಲ್ಲಿ ಮಾರುಕಟ್ಟೆ ಠಾಣೆ ಪಿಎಸ್ಐ ಭೀಮಾಶಂಕರ,ಅನಿಲ್ ಕುಮಾರ್ ಡಿ   ನಗರಠಾಣೆ ಪಿಎಸ್ಐ ರಾಜಕುಮಾರ್, ಗ್ರಾಮೀಣ ಠಾಣೆ ಪಿಎಸ್ಐ ಈರಯ್ಯ ನೇತೃತ್ವದಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ.

ವಿಸ್ಮಯ ನ್ಯೂಸ್, ಶಿರಸಿ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Exit mobile version