ಶಿರಸಿ: ಉತ್ತರಕನ್ನಡ ಜಿಲ್ಲೆಯ ಶಿರಸಿಯ ಮನೋಜ್ ಆರ್. ಹೆಗಡೆ (29) ಯುಪಿಎಸ್ ಸಿ ಪರೀಕ್ಷೆಯಲ್ಲಿ ದೇಶಕ್ಕೆ 213ನೇ ರ್ಯಾಂಕ್ ಪಡೆದಿದ್ದಾರೆ. ಮನೋಜ್ ಅವರು ಶಿರಸಿಯ ಎಮ್ ಇಎಸ್ ಕಾಲೇಜಿನಲ್ಲಿ ಪಿಯುಸಿ ಮಾಡಿದ ನಂತರ ಧಾರವಾಡದಲ್ಲಿ ಅಗ್ರಿಕಲ್ಚರ್ ಪದವಿ ಪಡೆದಿದ್ದಾರೆ. ಮೂರು ಸಲ ಪರೀಕ್ಷೆಯಲ್ಲಿ ಪಾಸಾಗಿದ್ದರೂ ಸಂದರ್ಶನದಲ್ಲಿ ಫೇಲಾಗಿದ್ದರು, ಇದೀಗ ನಾಲ್ಕನೇ ಪ್ರಯತ್ನದಲ್ಲಿ ಯುಪಿಎಸ್‌ಸಿ ಯನ್ನು ಪಾಸ್ ಮಾಡಿದ್ದು, ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಪಶುಸಂಗೋಪನೆ ಇಲಾಖೆಯ ನಿವೃತ್ತ ಅಧಿಕಾರಿ ರಾಮನಾಥ ಹೆಗಡೆ ಹಾಗೂ ಪ್ರಾಥಮಿಕ ಶಾಲೆಯ ಶಿಕ್ಷಕಿ ಗೀತಾ ಹೆಗಡೆಯವರ ಪುತ್ರನಾಗಿದ್ದಾರೆ. ದೆಹಲಿಯಲ್ಲಿ ಡಾ. ಶಿವಕುಮಾರ್ ಹಾಗೂ ಶಿರಸಿಯಲ್ಲಿ ವಿ.ಆರ್. ಹೆಗಡೆ ಎಸ್.ಜಿ. ಕರಿಯರ್ ಅಕಾಡೆಮಿಯಲ್ಲಿ ಕೋಚಿಂಗ್ ಪಡೆದಿದ್ದರು.
ವಿಸ್ಮಯ ನ್ಯೂಸ್, ಶಿರಸಿ
ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.