ಯುಪಿಎಸ್‌ಸಿ ಫಲಿತಾಂಶ: ದೇಶಕ್ಕೆ 311ನೇ ರ್ಯಾಂಕ್ ಪಡೆದ ಹೊನ್ನಾವರದ ಯುವಕ

ಹೊನ್ನಾವರ: ತಾಲೂಕಿನ ಮಂಕಿ ಗ್ರಾಮದ ನಿವಾಸಿ ದೀಪಕ್ ಆರ್. ಶೇಟ್ ಯುಪಿಎಸ್‌ಸಿ ಫಲಿತಾಂಶದಲ್ಲಿ ದೇಶಕ್ಕೆ 311ನೇ ರ್ಯಾಂಕ್ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಖಾಸಗಿ ಸಂಸ್ಥೆಯಲ್ಲಿ ಉದ್ಯೋಗ ಮಾಡುತ್ತಿದ್ದ ದೀಪಕ್ ಅವರು, ಬೆಂಗಳೂರಿನಲ್ಲಿ ಯುಪಿಎಸ್‌ಸಿ ತರಬೇತಿ ಪಡೆದುಕೊಂಡಿದ್ದರು.

ತಾಲೂಕಿನಲ್ಲಿ ಪ್ರಾಥಮಿಕ ಶಿಕ್ಷಣ ನಡೆಸಿ, 6ನೇ ತರಗತಿಯಿಂದ 10ನೇ ತರಗತಿಯವರೆಗೆ ಶಿರಸಿಯ ಮೊರಾರ್ಜಿ ಶಾಲೆಯಲ್ಲಿ ಅಧ್ಯಯನ ಮಾಡಿದ್ದಾರೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಟಾಪರ್ ಆಗಿದ್ದ ದೀಪಕ್ ಮೂಡಬಿದಿರೆ ಆಳ್ವಾಸ್ ಕಾಲೇಜಿನಲ್ಲಿ ಪಿಯು ಹಾಗೂ ಬೆಂಗಳೂರಿನ ಆರ್.ವಿ. ಕಾಲೇಜಿನಲ್ಲಿ ಎಂಜಿನಿಯರಿoಗ್ ಅಧ್ಯಯನ ಮಾಡಿದ್ದರು.

ವಿಸ್ಮಯ ನ್ಯೂಸ್, ಹೊನ್ನಾವರ

Exit mobile version