Follow Us On

WhatsApp Group
Important
Trending

ಅಕ್ರಮವಾಗಿ ದಾಸ್ತಾನಿಟ್ಟಿದ್ದ 45 ಕ್ವಿಂಟಲ್ ಪಡಿತರ ಅಕ್ಕಿ ವಶಕ್ಕೆ: ಆರೋಪಿ ಬಂಧನ

ಮುoಡಗೋಡ: ಮನೆಯಲ್ಲಿ ಅಕ್ರಮವಾಗಿ ದಾಸ್ತಾನಿಟ್ಟಿದ್ದ ಪಡಿತರ ಅಕ್ಕಿಯನ್ನು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಜಪ್ತಿ ಮಾಡಿದ್ದಾರೆ. ಪಟ್ಟಣದ ಕಿಲ್ಲೆ ಓಣಿ ನಿವಾಸಿ ನೂರ್ ಅಹ್ಮದ್ ಜಾಫರ್ ಮುಲ್ಲಾ ಹಾಗೂ ಸಿರಾಜ್ ಮುಲ್ಲಾ ಎಂಬುವವರೇ ಅಕ್ರಮವಾಗಿ ಪಡಿತರ ಅಕ್ಕಿಯನ್ನು ದಾಸ್ತಾನು ಇರಿಸಿಕೊಂಡಿದ್ದರು.

45 ಕ್ವಿಂಟಲ್ ಪಡಿತರ ಅಕ್ಕಿಯನ್ನು ದಾಸ್ತಾನು ಇರಿಸಲಾಗಿತ್ತು. ಪಡಿತರ ಚೀಟಿದಾರರಿಂದ ಅಕ್ಕಿಯನ್ನು ಸಂಗ್ರಹಿಸುತ್ತಿದ್ದ ಆರೋಪಿತರು, ಅದನ್ನು ಬೇರೆಡೆಗೆ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಅಕ್ಕಿ ದಾಸ್ತಾನಿನ ಕುರಿತು ಮಾಹಿತಿ ಕಲೆಹಾಕಿದ ಮುಂಡಗೋಡ ಪೊಲೀಸರು ದಾಳಿ ನಡೆಸಿ ಆರೋಪಿತರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ

ವಿಸ್ಮಯ ನ್ಯೂಸ್, ಕಾರವಾರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button