Important
Trending

ಜಿಲ್ಲೆಯಲ್ಲಿ ಮೊದಲ ಬಾರಿಗೆ ಭಟ್ಕಳದಲ್ಲಿ ರಾತ್ರಿ ವೇಳೆ ಮಹಿಳಾ ಪೊಲೀಸರ ಗಸ್ತು ಕಾರ್ಯಕ್ಕೆ ಚಾಲನೆ: ಬೆಳಗಿನ ಜಾವದ ವರೆಗೂ ಪ್ರಮುಖ ರಸ್ತೆಯಲ್ಲಿ ಗಸ್ತು ನಡೆಸಿ ಗಮನಸೆಳೆದ ಮಹಿಳಾ ಪೊಲೀಸರು

ಭಟ್ಕಳ: ಉತ್ತರಕನ್ನಡ ಜಿಲ್ಲೆಯಲ್ಲಿ ಮೊದಲ ಬಾರಿಗೆ ಭಟ್ಕಳದಲ್ಲಿ ರಾತ್ರಿ ವೇಳೆ ಮಹಿಳಾ ಪೊಲೀಸರ ಗಸ್ತು ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಪಿಎಸ್‌ಐ ಸುಮಾ ಬಿ. ನೇತೃತ್ವದಲ್ಲಿ ರಾತ್ರಿ ರಸ್ತೆಗೆ ಇಳಿದ ಮಹಿಳಾ ಪೊಲೀಸ್ ಸಿಬ್ಬಂದಿಗಳು ಆಯಕಟ್ಟಿನ ಸ್ಥಳಗಳಲ್ಲಿ ನಿಂತು ವಾಹನ ತಪಾಸಣೆ ನಡೆಸಿದರು.

ರಸ್ತೆಯಲ್ಲಿ ಅಡ್ಡಾಡುತ್ತಿದ್ದ ಸಂಶಯಾಸ್ಪದ ವ್ಯಕ್ತಿಗಳ ವಿಚಾರಣೆಯನ್ನೂ ನಡೆಸಿದರು. ಯಾವುದೇ ಅಳುಕು ಇಲ್ಲದೇ ತಂಡ ಕಟ್ಟಿಕೊಂಡು ಭಟ್ಕಳ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಗಸ್ತು ನಡೆಸಿ, ಎಲ್ಲರ ಹುಬ್ಬೇರುವಂತೆ ಮಾಡಿದರು, ನಸುಕಿನ ವೇಳೆ 5 ಗಂಟೆಯವರೆಗೂ ನಿದ್ದೆ ಬಿಟ್ಟು ಗಸ್ತು ನಡೆಸಿದ್ದು, ಈ ವಿಶೇಷ ಕರ್ತವ್ಯ ನಿರ್ವಹಿಸಿದ ಪಿಎಸ್ ಐ ಸುಮಾ ಬಿ ನೇತೃತ್ವದ ಮಹಿಳಾ ಪೊಲೀಸ್ ತಂಡಕ್ಕೆ ಜಿಲ್ಲಾ ವರಿಷ್ಠಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ವಿಸ್ಮಯ ನ್ಯೂಸ್, ಕಾರವಾರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button