Follow Us On

WhatsApp Group
Important
Trending

ವೇಶ್ಯಾವಾಟಿಕೆ ನಡೆಸುತ್ತಿದ್ದ ಖಾಸಗಿ ವಸತಿ ಗೃಹದ ಮೇಲೆ ದಾಳಿ: ಮುಂಬೈ, ಕೋಲ್ಕತ್ತಾ ಮತ್ತು ಬಳ್ಳಾರಿ ಮೂಲದ ಯುವತಿಯರನ್ನು ಬಳಸಿ ದಂಧೆ ನಡೆಸುತ್ತಿದ್ದ ಆರೋಪಿ ವಶಕ್ಕೆ

ಗೋಕರ್ಣ: ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ಇಲ್ಲಿನ ಖಾಸಗಿ ವಸತಿ ಗೃಹವೊಂದರ ಮೇಲೆ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ. ಇಲ್ಲಿನ ಖಾಸಗಿ ವಸತಿಗೃಹವೊಂದರಲ್ಲಿ ಕಳೆದ ಹಲವು ದಿನಗಳಿಂದ ವೇಶ್ಯಾವಾಟಿಕೆ ನಡೆಯುತ್ತಿತ್ತು ಎಂಬ ಆರೋಪ ಕೇಳಿಬಂದಿತ್ತು.

ಈ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿ, ದುಷ್ಕೃತ್ಯದಲ್ಲಿ ತೊಡಗಿದ್ದ ಕಿಂಗ್ ಪಿನ್ ಮತ್ತು ಆತನ ಸಹಚರನನ್ನು ಬಂಧಿಸಿದ್ದು, ನಾಲ್ವರು ಯುವತಿಯರನ್ನು ರಕ್ಷಿಸಿದ್ದಾರೆ. ಯುವತಿಯರು ಮುಂಬೈ, ಕೋಲ್ಕತ್ತಾ ಮತ್ತು ಬಳ್ಳಾರಿ ಮೂಲದವರೆಂದು ತಿಳಿದುಬಂದಿದೆ. ಪಿಎಸ್‌ಐ ವಸಂತಿ ಆಚಾರಿ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದೆ.

ವಿಸ್ಮಯ ನ್ಯೂಸ್, ಕಾರವಾರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button