ಬೆಂಕಿ ತಗುಲಿ ಹೊತ್ತಿ ಉರಿದ ಹೆದ್ದಾರಿಯಲ್ಲಿ ಸಾಗುತ್ತಿದ್ದ ಲಾರಿ: ಸುಟ್ಟು ಕರಕಲು: ಕೆಲಕಾಲ ಆತಂಕದ ವಾತಾವರಣ

ಅಂಕೋಲಾ: ಹೆದ್ದಾರಿಯಲ್ಲಿ ಸಾಗುತ್ತಿದ್ದ ಲಾರಿಯೊಂದು ಆಕಸ್ಮಿಕವಾಗಿ ಹೊತ್ತಿ ಉರಿದು,ಕೆಲಕಾಲ ಆತಂಕದ ವಾತಾವರಣ ಮೂಡಿಸಿದ ಘಟನೆ ಭಾನುವಾರ ಸಂಭವಿಸಿದೆ. ಹೊಸಪೇಟೆಯಿಂದ ಗೋವಾ ಕಡೆ ಮ್ಯಾಂಗನೀಸ್ ತುಂಬಿ ಸಾಗಿಸುತ್ತಿತ್ತು ಎನ್ನಲಾದ ಲಾರಿಗೆ ಅದಾವುದೋ ಕಾರಣದಿಂದ ಆಕಸ್ಮಿಕ ಬೆಂಕಿ ಹೊತ್ತಿಕೊಂಡು ಉರಿದ ಘಟನೆ ಅಂಕೋಲಾ – ಯಲ್ಲಾಪುರ ಮಾರ್ಗ ಮಧ್ಯೆ ಗುಳ್ಳಾಪುರ ಅರಬೈಲ್ ನಡುವೆ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಸಂಭವಿಸಿದೆ.

ಕಿರವತ್ತಿ ಮೂಲದವರಿಗೆ ಸಂಬಂಧಿಸಿದ ಲಾರಿ ಇದು ಎನ್ನಲಾಗಿದ್ದು ಲಾರಿಯ ಯಾಂತ್ರಿಕ ದೋಷ ಅಥವಾ ಇತರ ಕಾರಣಗಳಿಂದ ಬೆಂಕಿ ತಗುಲಿ, ಲಾರಿಯ ಬಹುತೇಕ ಭಾಗ ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿದೆ.

ಯಲ್ಲಾಪುರದಿಂದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದು , ಹಾನಿಯ ಅಂದಾಜು ತಿಳಿದು ಬರಬೇಕಿದೆ.ಹೆದ್ದಾರಿಯಲ್ಲಿ ಸಂಭವಿಸಿದ ಆಕಸ್ಮಿಕ ಬೆಂಕಿ ಅವಘಡದಿಂದ ಕೆಲಕಾಲ ಹೆದ್ದಾರಿ ಸಂಚಾರಕ್ಕೆ ವ್ಯತ್ಯಯವಾಗಿತ್ತು.

ಸ್ಥಳೀಯರು ಸೇರಿದಂತೆ ಹೆದ್ದಾರಿ ಪ್ರಯಾಣಿಕರು ಮತ್ತಿತರರು ಭಾರಿ ಸಂಖ್ಯೆಯಲ್ಲಿ ಜಮಾವಣೆ ಗೊಂಡಿದ್ದರು. ಅದೃಷ್ಟವಶಾತ್ ಲಾರಿ ಚಾಲಕ ಅಪಾಯದಿಂದ ಪಾರಾಗಿದ್ದಾನೆ ಎನ್ನಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.ಬೆಂಕಿ ಅವಘಡಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಳು ತಿಳಿದುಬರಬೇಕಿದೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Exit mobile version