ಹೊನ್ನಾವರ: ಪಟ್ಟಣದ ಸರ್ಕಲ್ ಬಳಿ ಅಗ್ನಿ ದುರಂತ ಸಂಭವಿಸಿದ್ದು, 4 ಅಂಗಡಿಗಳು ಸುಟ್ಟು ಭಸ್ಮವಾಗಿದ್ದು, ಲಕ್ಷಾಂತರ ರೂಪಾಯಿ ಹಾನಿಯಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂನ್ ನಿಂದಾಗಿ ಈ ಅನಾಹುತ ಸಂಭವಿಸಿದೆ ಎನ್ನಲಾಗಿದೆ. ಪಟ್ಟಣದ ಹೈವೆ ಸರ್ಕಲ್ ಬಳಿ ಸೋಮವಾರ ಬೆಳಗಿನ ಜಾವ ಸಂಭವಿಸಿದ ಅಗ್ನಿದುರಂತದಿoದಾಗಿ ನಾಲ್ಕು ಅಂಗಡಿಗಳು ಬೆಂಕಿಗಾಹುತಿಯಾಗಿವೆ ಬೆಳಿಗ್ಗಿನ ಜಾವ ಅಂಗಡಿ ಮುಚ್ಚಿದ್ದರಿಂದ ಸ್ಥಳದಲ್ಲಿ ಯಾರು ಇರಲಿಲ್ಲ. ವಿಷಯ ತಿಳಿದು ಅಗ್ನಿಶಾಮಕ ದಳವರು ಅಕ್ಕಪಕ್ಕ ಬೆಂಕಿ ಹರಡಂತೆ ತಡೆಯಲು ಯಶಸ್ವಿಯಾಗಿದ್ದಾರೆ.
ಗಣಪತಿ ಸೋಮಯ್ಯ ನಾಯ್ಕ ಅವರ ಹೂವಿನ ಅಂಗಡಿ, ಗೋವಿಂದ ಶೆಟ್ಟಿಯವರ ತರಕಾರಿ ಅಂಗಡಿ, ಹಾಗೂ ಮಹೇಶ ನಾಗಪ್ಪ ನಾಯ್ಕರವರ ಹಣ್ಣಿನ ಅಂಗಡ ಗಳು ಸಂಪೂರ್ಣ ಸುಟ್ಟು ಹೋಗಿದ್ದು , ವ್ಯಾಪಾರಿಗಳು ತೀವ್ರ ನಷ್ಟ ಅನುಭವಿಸುವಂತಾಗಿದೆ. ಪಟ್ಟಣ ಪಂಚಾಯತ ಅಧ್ಯಕ್ಷ ಶಿವರಾಜ ಮೇಸ್ತ, ತಹಶಿಲ್ದಾರರ ನಾಗರಾಜ ನಾಯ್ಕಡ್ ಹಾಗೂ ಪೋಲಿಸ್ ಇಲಾಖೆಯವರು ಆಗಮಿಸಿ, ಸ್ಥಳಪರಿಶೀಲನೆ ನಡೆಸಿದರು.
ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ
ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.