ಶಿರಸಿ: ಅತ್ಯಂತ ವಿಶಿಷ್ಠ ಸಾಧನೆ ಮೂಲಕ ಗಮನಸೆಳೆದು, ಕಳೆದ 7 ವರ್ಷಗಳಿಂದ ನಿರಂತರ ವಿಶ್ವಶಾಂತಿ ಸಂದೇಶ ಸಾರುವ ಯಕ್ಷನೃತ್ಯ ರೂಪಕದ ಬಾಲೆ ತುಳಸಿ ಹೆಗಡೆ ಸಾಧನೆ ಇದೀಗ ದೇಶದ ಪ್ರತಿಷ್ಠಿತ ಇಂಡಿಯಾ ಬುಕ್ ರೆಕಾರ್ಡ್ ನಲ್ಲಿ ಸ್ಥಾನ ಪಡೆದು ದಾಖಲೆ ಬರೆದಿದ್ದಾಳೆ. ಅತ್ಯಂತ ಕಿರಿಯ ವಯಸ್ಸಿನಲ್ಲೇ ತುಳಸಿ ಹೆಗಡೆಯು ಒಂದು ಗಂಟೆಗೂ ಅಧಿಕ ಕಾಲದ ಯಕ್ಷನೃತ್ಯ ರೂಪಕವನ್ನು ಪ್ರಸ್ತುತಗೊಳಿಸುತ್ತಿದ್ದಾಳೆ. 13 ರ ತುಳಸಿ ಕಳೆದ ಏಳು ವರ್ಷಗಳಿಂದ ಸತತ ವಿವಿಧ ಪೌರಾಣಿಕ ಕಥೆ ಒಳಗೊಂಡ ವಿಶ್ವಶಾಂತಿ ಸರಣಿ ಪ್ರಸ್ತುತಗೊಳಿಸುವ ಬಾಲೆ ಎಂದೇ ಪ್ರಸಿದ್ಧಿ ಪಡೆದಿದ್ದಾಳೆ.
ತುಳಸಿ ಹೆಗಡೆ ಅವಳ ಈ ವಿಶಿಷ್ಟ ಸಾಧನೆಯನ್ನು ಅತ್ಯಂತ ಕಿರಿಯ ವಯಸ್ಸಿನಿಂದ ವಿಶ್ವಶಾಂತಿ ಸರಣಿ ಸಂದೇಶ ಸಾರುವ ಬಾಲ ಯಕ್ಷಗಾನ ಕಲಾವಿದೆ ಎಂದೇ ಇಂಡಿಯಾ ಬುಕ್ ಆಫ್ ರೆಕಾರ್ಡ ನೀಡುವ ಪ್ರಮಾಣ ಪತ್ರದಲ್ಲಿ ಉಲ್ಲೇಖವಾಗಿರುವುದು ವಿಶೇಷವಾಗಿದೆ. ತುಳಸಿ ಮುಮ್ಮೇಳದ ಏಕವ್ಯಕ್ತಿ ರೂಪಕ ಇದಾಗಿದ್ದು, ಹಿಮ್ಮೇಳದಲ್ಲಿ ಪ್ರಸಿದ್ಧ ಕಲಾವಿದರ, ನಿರ್ದೇಶಕರ, ಸಾಹಿತಿಗಳ, ಪರಿಣಿತರ ಒಂಬತ್ತು ಜನರ ತಂಡ ಕೆಲಸ ಮಾಡುತ್ತಿದೆ. ಪ್ರಸ್ತುತ ಶಿರಸಿಯ ಮಾರಿಕಾಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದಾಳೆ.
ವಿಸ್ಮಯ ನ್ಯೂಸ್, ಕಾರವಾರ
ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.