Join Our

WhatsApp Group
Important
Trending

ಪಲ್ಟಿಯಾದ ಲಾರಿ: ರಾಷ್ಟ್ರೀಯ ಹೆದ್ದಾರಿ ತುಂಬೆಲ್ಲಾ ನೀರಿನಂತೆ ಹರಿದ ಬೆಲ್ಲ!

ಯಲ್ಲಾಪುರ: ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 63ರ ತಾಲೂಕಿನ ಅರಬೈಲ್ ಘಟ್ಟದಲ್ಲಿ ನಡೆದಿದೆ. ಯಲ್ಲಾಪುರ ಕಡೆಯಿಂದ ಅಂಕೋಲಾ ಕಡೆಗೆ ಬೆಲ್ಲವನ್ನು ಸಾಗಿಸುತ್ತಿದ್ದ ಟ್ಯಾಂಕರ್, ಅರಬೈಲ್ ಘಟ್ಟದ ಸಮೀಪ ಪಲ್ಟಿಯಾಗಿದೆ. ಅಪಘಾತದಲ್ಲಿ ಟ್ಯಾಂಕರ್ ಜಖಂಗೊoಡಿದ್ದು, ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಲಾರಿ ಪಲ್ಟಿಯಾದ ಹಿನ್ನಲೆಯಲ್ಲಿ ಲಾರಿಯಲ್ಲಿ ಇದ್ದ ಬೆಲ್ಲ, ಚೆಲ್ಲಿ ರಸ್ತೆಯ ಮೇಲೆ ಹರಿದಿದೆ. ಇದರಿಂದಾಗಿ ಇತರೆ ವಾಹನಗಳ ಸಂಚಾರಕ್ಕೆ ಕಿರಿಕಿರಿ ಆಗಿದೆ.

ವಿಷಯ ತಿಳಿದ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ, ರಸ್ತೆಯನ್ನು ಸ್ವಚ್ಛಗೊಳಿಸಿ, ಸುಮಗ ವಾಹನ ಸಂಚಾರಕ್ಕೆ ಕ್ರಮಕೈಗೊಂಡರು. ಗಾಯಾಳು ಚಾಲಕನನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಸ್ಮಯ ನ್ಯೂಸ್, ಕಾರವಾರ

Back to top button