ಟಿಕೆಟ್ ಇಲ್ಲದೆ ಪ್ರಯಾಣ ಮಾಡುತ್ತಿದ್ದ ವ್ಯಕ್ತಿಯ ಬಳಿ ಸಿಕ್ಕಿತು ಬರೋಬ್ಬರಿ 2 ಕೋಟಿ: ರೈಲಿನಲ್ಲಿ ಅಕ್ರಮವಾಗಿ ಹಣ ಸಾಗಾಟ
ಕಾರವಾರ: ಯಾವುದೇ ದಾಖಲೆ ಇಲ್ಲದೆ ಎರಡು ಕೋಟಿ ಹಣವನ್ನು ರೈಲಿನಲ್ಲಿ ಸಾಗಿಸುತ್ತಿದ್ದಾಗ ರೈಲ್ವೆ ಪೊಲೀಸರು ಆರೋಪಿಯನ್ನು ಬಂಧಿಸಿದ ಘಟನೆ ಕಾರವಾರದಲ್ಲಿ ನಡೆದಿದೆ. ಈ ಹಣವನ್ನು ಮುಂಬೈನಿoದ ಮಂಗಳೂರಿಗೆ ಸಾಗಿಸಲಾಗುತ್ತಿತ್ತು ಎನ್ನಲಾಗಿದೆ. ಆಶ್ಚರ್ಯ ಅಂದ್ರೆ ಆರೋಪಿ ಟಿಕೆಟ್ ಕೂಡಾ ಇಲ್ಲದೆ, ಹಣವನ್ನು ಸಾಗಿಸುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ರಾಜಸ್ಥಾನ ಮೂಲದ ಮನೋಹರ್ ಸಿಂಗ್ ಅಲಿಯಾಸ್ ಚೇನ್ ಸಿಂಗ್ ಬಂಧಿತ ಆರೋಪಿ.
ಮಂಗಳೂರು ಎಕ್ಸ್ ಪ್ರೆಸ್ ರೈಲಿನಲ್ಲಿ ಟಿಕೆಟ್ ಪಡೆಯದೆ ಪ್ರಯಾಣಿಸುತಿದ್ದ ಮನೋಹರ್ ಸಿಂಗ್ ನನ್ನು ರೈಲ್ವೆ ಪೊಲೀಸರು ಪತ್ತೆಹಚ್ಚಿ ದಂಡ ವಿಧಿಸಿದ್ದರು. ಈ ವೇಳೆ ಅನುಮಾನಗೊಂಡ ರೈಲ್ವೆ ಪೊಲೀಸರು ಈತನ ಬಳಿ ಇದ್ದ ಬ್ಯಾಗ್ ಅನ್ನು ತಪಾಸಣೆಗೆ ಒಳಪಡಿಸಿದಾಗ ಈತನ ಬಳಿ ಇದ್ದ ಬ್ಯಾಗಿನಲ್ಲಿ 100 ಬಂಡಲ್ ನ ಎರಡು ಕೋಟಿ ರೂಪಾಯಿ ಹಣ ಪತ್ತೆಯಾಗಿದೆ.
ಮನೋಹರ್ ಸಿಂಗ್ ಮುಂಬೈ ವ್ಯಕ್ತಿಯೊಬ್ಬರ ಜೊತೆ ಕೆಲ ಮಾಡುತ್ತಿದ್ದು, ಅವರ ಸೂಚನೆ ಮೇರೆಗೆ ಈ ಹಣವನ್ನು ಸಾಗಿಸುತ್ತಿದ್ದ ಎನ್ನಲಾಗದೆ. ರೈಲ್ವೆ ಪೊಲೀಸರು ಆರೋಪಿಯನ್ನು ಕಾರವಾರ ಗ್ರಾಮಾಂತರ ಠಾಣೆ ಪೊಲೀಸರ ವಶಕ್ಕೆ ನೀಡಿದ್ದು, ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.
ವಿಸ್ಮಯ ನ್ಯೂಸ್, ಕಾರವಾರ
ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.