ಮುರ್ಡೇಶ್ವರ ಪ್ರವಾಸಕ್ಕೆ ಬಂದ ಇಬ್ಬರು ಯುವಕರು ಸಮುದ್ರದ ಅಲೆಗೆ ಸಿಲುಕಿ ನಾಪತ್ತೆ: ಮೂವರ ರಕ್ಷಣೆ

ಭಟ್ಕಳ: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುರುಡೇಶ್ವರ ಪ್ರವಾಸಕ್ಕೆ ಬಂದ ಪ್ರತ್ಯೇಕ ತಂಡಗಳಲ್ಲಿ ಇಬ್ಬರು ಯುವಕರು ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿದ್ದು ಮೂವರನ್ನು ರಕ್ಷಿಸಿದ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರದಿಂದ 12 ಯುವಕರ ತಂಡ ಪ್ರವಾಸಕ್ಕೆಂದು ಮುರುಡೇಶ್ವರಕ್ಕೆ ಬಂದಿದ್ದು, ಅವರಲ್ಲಿ ಅಬ್ರಾರ್ ಶೇಖ್ ಹಾಗೂ, ಶಿವಮೊಗ್ಗ ಜಿಲ್ಲೆಯ ಆಗೊಂಬೆಯಿoದ ತನ್ನ ತಂದೆ ತಾಯಿಯೊಂದಿಗೆ ಪ್ರವಾಸಕ್ಕೆ ಬಂದಿದ್ದ. ಒಂದೇ ಕುಟುಂಬದ ಮೂವರು ಸದಸ್ಯರಲ್ಲಿ ಸುಶಾಂತ ಎಂ.ಎಸ್ ಎಂಬ ಯುವಕ ಸಮುದ್ರಪಾಲಾಗಿದ್ದಾನೆ ಎಂದು ಮುರುಡೇಶ್ವರ ಪೊಲೀಸರು ಮಾಹಿತಿ ನೀಡಿದ್ದಾರೆ.

ಶ್ರೀನಿವಾಸ್‌ಪುರದ 12 ಯುವಕರು ಮುರುಡೇಶ್ವರ ಸಮುದ್ರದಲ್ಲಿ ಈಜುತ್ತಿದ್ದಾಗ ಇದ್ದಕ್ಕಿದ್ದಂತೆ ದೊಡ್ಡ ಅಲೆಯೊಂದು ಬಂದು ಮೂವರನ್ನು ಸೆಳೆದುಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರಲ್ಲಿ ಇಬ್ಬರು ಯುವಕರನ್ನು ರಕ್ಷಿಸಿದ್ದು, ಅಬ್ರಾರ್ ಶೇಖ್ ಎಂಬಾತನು ಅಲೆಗಳ ನಡುವೆ ಕಣ್ಮರೆಯಾಗಿದ್ದಾನೆ. ಅದೇ ರೀತಿ ಆಗೊಂಬೆಯ ಒಂದೇ ಕುಟುಂಬದ ಮೂವರು ಸಮುದ್ರದಲ್ಲಿ ಈಜಾಡುತ್ತಿದ್ದಾಗ ಸುಶಾಂತ್ ಮತ್ತು ಆತನ ಚಿಕ್ಕಪ್ಪ ಅಲೆಗಳಲ್ಲಿ ಮುಳುಗಲು ಆರಂಭಿಸಿದರು. ಈ ವೇಳೆ ಸ್ಥಳೀಯ ಮೀನುಗಾರರು ಸುಶಾಂತ್ನ ಚಿಕ್ಕಪ್ಪನನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ, ಆದರೆ ಸುಶಾಂತ್ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದಾನೆ. ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಇಬ್ಬರು ಯುವಕರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Exit mobile version