ಮತದಾನ ಹಿನ್ನಲೆ: ಜೂನ್ 13ರಂದು ಹಲವೆಡೆ ನಿಷೇಧಾಜ್ಞೆ ಜಾರಿ: ಜಿಲ್ಲಾಧಿಕಾರಿಗಳ ಆದೇಶ

ಕಾರವಾರ: ಕರ್ನಾಟಕ ಪಶ್ಚಿಮ ಶಿಕ್ಷಕರ ಮತಕ್ಷೇತ್ರ ಚುನಾವಣೆ ಘೋಷಣೆಯಾಗಿ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಮತದಾನ ನಡೆಯುವ ದಿನವಾದ ಜೂನ್ 13ರಂದು ಮತದಾನ ಕಾರ್ಯವು ಸುಸೂತ್ರವಾಗಿ ನಡೆಯಲು ಹಾಗೂ ಮತದಾನದ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಯ್ದುಕೊಂಡು ಶಾಂತಿ ಕಾಪಾಡುವ ಸಲುವಾಗಿ ಸಾರ್ವಜನಿಕ ಹಿತದೃಷ್ಠಿಯಿಂದ ಮತದಾನ ನಡೆಯುವ 15 ಮತಗಟ್ಟೆ ಭಾಗದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಬೆಳಿಗ್ಗೆ 7 ಗಂಟೆಯಿoದ ಸಂಜೆ 6 ಗಂಟೆಯವರೆಗೆ ಮತಗಟ್ಟೆ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಮತಗಟ್ಟೆಯ ಭಾಗದಲ್ಲಿ ನಡೆಯುವ ಸಂತೆ, ಜಾತ್ರೆ, ಇತರ ಎಲ್ಲ ಜನಸಂದಣಿಯನ್ನು ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ರನ್ವಯ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ವಿಸ್ಮಯ ನ್ಯೂಸ್, ಕಾರವಾರ

ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Exit mobile version