ಕುಮಟಾ: ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಜೂನ್ 17 ರಿಂದ ಜುಲೈ 16ರ ವರೆಗೆ 1 ತಿಂಗಳ ಅವಧಿಯ ಮೊಬೈಲ್ (ಸ್ಮಾರ್ಟ್) ಫೋನ್ ರಿಪೇರಿ ಉಚಿತ ತರಬೇತಿ ಹಮ್ಮಿಕೊಳ್ಳಲಾಗುತ್ತಿದೆ. ತರಬೇತಿಯನ್ನು ಊಟ ವಸತಿಯೊಂದಿಗೆ ನೀಡಲಾಗುವುದು. 18 ರಿಂದ 45ರ ವರ್ಷದೊಳಗಿನ ಆಸಕ್ತರು ನಿರುದ್ಯೋಗಿ ಅಭ್ಯರ್ಥಿಯಾಗಿದ್ದು, ಸ್ವ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು, ಕನ್ನಡ ಓದಲು ಬರೆಯಲು ಬರಬೇಕು ಹಾಗೂ ಗ್ರಾಮೀಣ ಪ್ರದೇಶದ ಬಿಪಿಎಲ್ ಅಭ್ಯರ್ಥಿಗೆ ಆದ್ಯತೆ ನೀಡಲಾಗುವುದು.
ತರಬೇತಿಯ ಜೊತೆಗೆ ವ್ಯಕ್ತಿತ್ವ ವಿಕಸನ, ಬ್ಯಾಂಕಿoಗ್, ಮಾರ್ಕೆಟಿoಗ್ ಹಾಗೂ ಉದ್ಯಮಶೀಲತಾ ತರಬೇತಿಯನ್ನು ನೀಡಲಾಗುವುದು. ಅರ್ಜಿಯ ಜೊತೆಗೆ ಅಗತ್ಯವಾಗಿ 4 ಪಾಸ್‌ಪೋರ್ಟ್ ಸೈಜ್ ಫೋಟೋ, ರೇಷನ್ ಕಾರ್ಡ್, ಆಧಾರ ಕಾರ್ಡ್, ಬ್ಯಾಂಕ್ ಪಾಸ್‌ಬುಕ್ ಪ್ರತಿಯನ್ನು ಲಗತ್ತಿಸಿ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಕುಮಟಾ ಕಚೇರಿಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕುಮಟಾ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯನ್ನು ಅಥವಾ ದೂರವಾಣಿ ಸಂಖ್ಯೆ
9449860007, 9538281989, 9916783825, 8880444612, 9620962004 ಗೆ ಸಂಪರ್ಕಿಸಬಹುದೆoದು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಸ್ಮಯ ನ್ಯೂಸ್, ಕುಮಟಾ