ಪಿಯುಸಿ ಪರೀಕ್ಷೆಯಲ್ಲಿ ಫೇಲ್: ಮನನೊಂದು ಸಾವಿಗೆ ಶರಣಾದ ವಿದ್ಯಾರ್ಥಿ

ಕುಮಟಾ: ರಾಜ್ಯಾದ್ಯಂತ ದ್ವೀತಿಯ ಪಿ.ಯು.ಸಿ ವಿದ್ಯಾರ್ಥಿಗಳ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ಪರೀಕ್ಷೆಯಲ್ಲಿ ಅನುತ್ತೀರ್ಣನಾಗಿದಕ್ಕೆ ಮನನೊಂದು ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಖಾಸಗಿ ಕಾಲೇಜಿನ ವಿದ್ಯಾರ್ಥಿಯೋರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಹೌದು, ಕುಮಟಾ ತಾಲೂಕಿನ ಹೊಲನಗದ್ದೆ ಗ್ರಾಮದ ಕಡ್ಲೆ ನಿವಾಸಿ ಪ್ರಣಮ್ ಈಶ್ವರ ನಾಯ್ಕ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಇಂದು ಪ್ರಕಟಗೊಂಡ ದ್ವೀತಿಯ ಪಿಯುಸಿ ಫಲಿತಾಂಶದಲ್ಲಿ ಪ್ರಣವ್ ನಾಯ್ಕ ಫೇಲ್ ಆಗಿದ್ದು, ಈ ವಿಷಯಕ್ಕೆ ಮನನೊಂದು ತಮ್ಮ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪ್ರಣಮ್ ನಾಯ್ಕ ಈತನ ತಂದೆ ಕುಮಟಾದಲ್ಲಿಯೇ ಆಟೋ ಚಲಾಯಿಸಿ ಜೀವನ ಸಾಗಿಸುತ್ತಿದ್ದರು. ಒಬ್ಬನೇ ಮಗನಾದ ಈತನನ್ನು ಬಹಳ ಪ್ರೀತಿಯಿಂದ ಬೆಳೆಸಿದ್ದರು ಎನ್ನಲಾಗಿದೆ. ಮಗನ ಕುರಿತಾಗಿ ಸಾಕಷ್ಟು ಕನಸುಗಳನ್ನು ಕಟ್ಟಿಕೊಂಡಿದ್ದರು.

ಸ್ಥಳಕ್ಕೆ ಕುಮಟಾ ಪಿ.ಎಸ್.ಐ ನವೀನ್ ನಾಯ್ಕ ಇವರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತಾಗಿ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್ ಯೋಗೇಶ್ ಮಡಿವಾಳ ಕುಮಟಾ

Exit mobile version