ಕಾರವಾರ - 10
ಸಿದ್ದಾಪುರ - 5
ಹೊನ್ನಾವರ - 2
ಯಲ್ಲಾಪುರ - 2
[sliders_pack id=”1487″]
ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಕರೊನಾ ಅಬ್ಬರ ಮುಂದುವರಿದಿದೆ. ಜಿಲ್ಲೆಯಲ್ಲಿ ಇಂದು ಕೂಡಾ 23 ಮಂದಿಗೆ ಸೋಂಕು ದೃಢಪಟ್ಟಿದೆ. ಜಿಲ್ಲೆಯ ಸಿದ್ದಾಪುರ ತಾಲೂಕಿನ ಸರ್ಕಾರಿ ಆಸ್ಪತ್ರೆಯ ವೈದ್ಯರೊಬ್ಬರಿಗೆ ಮತ್ತು ಅವರ ಸಹಾಯಕರೊಬ್ಬರಿಗೆ ಕರೊನಾ ದೃಢವಾಗಿದೆ. ವೈದ್ಯರಲ್ಲಿ ಲಕ್ಷಣ ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಅವರು ಪ್ರತಿನಿತ್ಯ ಹೊರ ಜಿಲ್ಲೆಯಿಂದ ಓಡಾಡುತ್ತಿದ್ದರು ಎಂಬ ಮಾಹಿತಿ ಲಭ್ಯವಿದೆ. ಈ ಹಿನ್ನಲೆಯಲ್ಲಿ ವೈದ್ಯರ ಕೊಠಡಿಯನ್ನು ಸೀಲ್ ಡೌನ್ ಮಾಡಲಾಗಿದೆ. ಉಳಿದಂತೆ ಬೆಂಗಳೂರಿನಿOದ ಬಂದ ಸಿದ್ದಾಪುರದ ಗ್ರಾಮೀಣ ಭಾಗದ ಮೂವರಲ್ಲಿ ಸೋಂಕು ದೃಢಪಟ್ಟಿದೆ. ಕಾರವಾರದಲ್ಲಿ 10, ಸಿದ್ದಾಪುರದಲ್ಲಿ 5 ಮಂದಿಗೆ ಸೋಂಕು ದೃಢಪಟ್ಟಿದೆ ಎಂಬ ಮಾಹಿತಿ ಬಂದಿದೆ. ಹೊನ್ನಾವರ, ಯಲ್ಲಾಪುರದಲ್ಲಿ ತಲಾ 2 , ಶಿರಸಿ, ಹಳಿಯಾಳ, ಭಟ್ಕಳ, ಮುಂಡಗೋಡದಲ್ಲಿ ತಲಾ ಒಂದು ಪ್ರಕರಣ ಕಾಣಿಸಿಕೊಂಡಿದೆ ಎನ್ನಲಾಗಿದೆ.
ಹಳದೀಪುರದಲ್ಲಿ ಒಂದೇ ಕುಟುಂಬದ ಇಬ್ಬರಿಗೆ ಸೋಂಕು
ಹೊನ್ನಾವರ ತಾಲೂಕಿನ ಹಳದೀಪುರದ ಮೂಲದ ಒಂದೇ ಕುಟುಂಬದ ಇಬ್ಬರಲ್ಲಿ ಸೋಂಕು ದೃಢಪಟ್ಟಿದೆ. 45 ವರ್ಷದ ಮಹಿಳೆ ಮತ್ತು 25 ವರ್ಷದ ಯುವಕನಿಗೆ ಪ್ರಾಥಮಿಕ ಸಂಪರ್ಕದಿOದ ಕರೊನಾ ಪಾಸಿಟಿವ್ ಬಂದಿದೆ ಎನ್ನಲಾಗಿದೆ.
ಈ ಕುರಿತ ಸಮಗ್ರ ಮಾಹಿತಿಯನ್ನು 8.30ಕ್ಕೆ ಪ್ರಸಾರವಾಗುವ ವಿಸ್ಮಯ ನ್ಯೂಸ್ ನಲ್ಲಿ ವೀಕ್ಷಿಸಿ.
ಈ ಬಗ್ಗೆ ಆರೋಗ್ಯ ಇಲಾಖೆಯ ಹೆಲ್ತ್ ಬುಲೆಟಿನ್ ವರದಿಯಲ್ಲಿ ಸ್ಪಷ್ಟವಾಗಬೇಕಿದೆ.
ಕಾರವಾರದಲ್ಲಿ ಲಾಕ್‌ಡೌನ್
ಕಾರವಾರದಲ್ಲಿ ಕರೊನಾ ಸೋಂಕಿತರು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಹಾಪ್‌ಡೇ ಲಾಕ್‌ಡೌನ್ ಮಾಡಲು ನಿರ್ಧರಿಸಲಾಗಿದೆ. ಈಗಾಗಲೇ ಕುಮಟಾ, ಅಂಕೋಲಾ, ಹೊನ್ನಾವರ, ಭಟ್ಕಳದಲ್ಲಿ ಅರ್ಧದಿನದ ಲಾಕ್‌ಡೌನ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.