ಕಾರವಾರ: ಕರಾವಳಿ ಜಿಲ್ಲೆ ಉತ್ತರಕನ್ನಡದಲ್ಲಿ ವರುಣಾರ್ಭಟ ಜೋರಾಗಿದೆ. ಐದು ದಿನಗಳ ಕಾಲ ರೆಡ್ ಹಾಗೂ ಆರೆಂಜ್ ಅಲರ್ಟ್ ನೀಡಲಾಗಿದ್ದ ಬೆನ್ನಲ್ಲೇ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿದಿದ್ದು ಸಾಕಷ್ಟು ಅವಾಂತರಗಳನ್ನೇ ಸೃಷ್ಟಿಸಿದೆ. ©vismaya tv
ಹೌದು, ಜಿಲ್ಲೆಯಲ್ಲಿ ಭಾರೀಮಳೆಯಾಗುವ ಕುರಿತು ನೈಸರ್ಗಿಕ ವಿಕೋಪ ಕೇಂದ್ರ ಮಾಹಿತಿ ನೀಡಿದೆ. ನಾಳೆಯ ವರೆಗೆ ರೆಡ್ ಅಲರ್ಟ್ ಮತ್ತು ಜೂನ್ 25ರ ವೆರೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಸಾರ್ವಜನಿಕರು ಮತ್ತು ಪ್ರವಾಸಿಗರು ಪ್ರಕೃತಿ ವಿಕೋಪ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ತುರ್ತುಸೇವೆಗೆ ಟೋಲ್ ಪ್ರೀ ಸಂಖ್ಯೆ ನೀಡಿದೆ.
ಇನ್ನೂ ನಾಲ್ಕೈದು ದಿನಗಳು ಭಾರೀ ಮಳೆ ಸುರಿಯುವ ಮುನ್ನೆಚ್ಚರಿಕೆಯನ್ನ ಹವಾಮಾನ ಇಲಾಖೆ ನೀಡಿದ್ದು ಇದು ತಗ್ಗು ಪ್ರದೇಶದ ನಿವಾಸಿಗಳ ಆತಂಕಕ್ಕೆ ಕಾರಣವಾಗಿರೋದಂತೂ ಸತ್ಯ.
ವಿಸ್ಮಯ ನ್ಯೂಸ್ ಕಾರವಾರ