Follow Us On

WhatsApp Group
Important
Trending

ಜ್ವರಕ್ಕೆ ಹೆದರಿ ವ್ಯಕ್ತಿ ಆತ್ಮಹತ್ಯೆ

[sliders_pack id=”1487″]

ಹೊನ್ನಾವರ: ಕರೊನಾ ಹಲವಾರು ಅವಾಂತರವನ್ನು ಸೃಷ್ಟಿಸುತ್ತಿದೆ. ಹೊನ್ನಾವರ ತಾಲೂಕಿನಲ್ಲಿ ಜ್ವರಕ್ಕೆ ಹೆದರಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ತಾಲೂಕಿನ ಹಳದಿಪುರ ಕಿರುಬೈಲ್ ನಿವಾಸಿ ಶಂಕರ್ ನಾಯ್ಕ ಎಂದು ಗುರುತಿಸಲಾಗಿದೆ. ಈತನಿಗೆ ಎರಡು ದಿನದಿಂದ ಜ್ವರ ಮತ್ತು ಕೆಮ್ಮು ಕಾಣಿಸಿಕೊಂಡಿದ್ದು, ಮಾನಸಿಕವಾಗಿ ನೊಂದಿದ್ದ ಎನ್ನಲಾಗಿದೆ. ಜ್ವರ ಬಂದಿರುವುದನ್ನು ಮನಸಿಗೆ ಹಚ್ಚಿಕೊಂಡು ಮಾವಿನ ಮರಕ್ಕೆ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜ್ವರ ಬಂದ ಹಿನ್ನೆಲೆಯಲ್ಲಿ ಸರಕಾರಿ ಆಸ್ಪತ್ರಾ ಸಿಬ್ಬಂದಿಗಳು ಮೃತ ದೇಹವನ್ನು ಸರಕಾರಿ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ.

ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ

Back to top button