ಒಳ ಉಡುಪಿನಲ್ಲಿ ಸುಮಾರು 19 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಸಾಗಾಟ: ಭಟ್ಕಳ‌ ಪ್ರಯಾಣಿಕ ವಶಕ್ಕೆ

ಭಟ್ಕಳ: ಒಳ ಉಡುಪಿನಲ್ಲಿ ಸುಮಾರು 18.95 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಸಾಗಾಟ ಮಾಡುತ್ತಿದ್ದ ಪ್ರಯಾಣಿಕನೊಬ್ಬನನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ದುಬೈ ನಿಂದ ಸ್ಪೈಸ್ ಜೆಟ್ ವಿಮಾನದಲ್ಲಿ ಬಂದಿಳಿದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಮೂಲದ ಪ್ರಯಾಣಿಕನೊಬ್ಬನನ್ನ ವಿಚಾರಣೆ ನಡೆಸಿದಾಗ ಈ ಘಟನೆ ಬೆಳಕಿಗೆ ಬಂದಿದೆ.

ಆರೋಪಿ ಮಹಿಳೆಯರು ಬಳಸುವ ಒಳ ಉಡುಪಿನ ರಟ್ಟಿನ ಪೆಟ್ಟಿಗೆಯಲ್ಲಿ ಚಿನ್ನವನ್ನು ಕಳ್ಳ ಸಾಗಾಣಿಕೆ ಮಾಡುತ್ತಿದ್ದದ್ದು ಬಯಲಾಗಿದೆ. ಆರೋಪಿಯಿಂದ 364.5 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ ಇದರ ಮೌಲ್ಯ ರೂ 18,95,400 ಎಂದು ಅಂದಾಜಿಸಲಾಗಿದೆ.

ವಿಸ್ಮಯ ನ್ಯೂಸ್ ಉದಯ್ ಎಸ್ ನಾಯ್ಕ ಭಟ್ಕಳ

Exit mobile version