ಕುಮಟಾ: ಬಾಣಂತಿ ಆಸ್ಪತ್ರೆಯಲ್ಲಿ ಸಾವನಪ್ಪಿದ್ದು, ಇದಕ್ಕೆ ವೈದ್ಯರ ನಿರ್ಲಕ್ಷವೇ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಆಕ್ರೋಶ ಹೊರಹಾಕಿದ ಘಟನೆ ಕುಮಟಾದಲ್ಲಿ ನಡೆದಿದೆ. ಆದರೆ, ವೈದ್ಯರು ಇದು ನಮ್ಮ ನಿರ್ಲಕ್ಷ್ಯದಿಂದ ಆಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹೃದಯಾಘಾತದಿಂದ ಸಾವನ್ನಪ್ಪಿದ್ದು, ವಿನಾಕಾರಣ ಆರೋಪ ಮಾಡುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.
ಜಯಮಾಲ ಎನ್ನುವವರು ಹೆರಿಗೆಗಾಗಿ ಪಟ್ಟಣದ ಜಾನು ಮಣಕಿಕರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶಸ್ತçಚಿಕಿತ್ಸೆ ಮೂಲಕ ಮಗುವನ್ನು ಹೊರತೆಗೆಯಲಾಗಿದ್ದು, ತಾಯಿ-ಮಗು ಆರೋಗ್ಯವಾಗಿದ್ದರು. ಆದರೆ, 2-3 ದಿನಗಳಿಂದ ಎದೆ ನೋವು ಕಾಣಿಸಿಕೊಂಡಿತ್ತು. ಈ ಬಗ್ಗೆ ವೈದ್ಯರಿಗೆ ತಿಳಿಸಿದಾಗ ವೈದ್ಯರು ಗ್ಯಾಸ್ಟಿಕ್ ಎಂದು ಹೇಳಿ ಚಿಕಿತ್ಸೆ ನೀಡುತ್ತಾ ಬಂದಿದ್ದು, ಬಳಿಕ ಮೃತಪಟ್ಟಿದ್ದಾಳೆ.
ಹೀಗಾಗಿ ಜಯಮಾಲ ಸಾವಿಗೆ ವೈದ್ಯರ ನಿರ್ಲಕ್ಷವೇ ಕಾರಣ ಎಂದು ಆಸ್ಪತ್ರೆಯ ಎದುರು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿದ್ದ ಪಿಎಸ್‌ಐ ನವೀನ ನಾಯ್ಕ, ಕುಟುಂಬಸ್ಥರನ್ನು ಸಮಾಧಾನಪಡಿಸಿ, ತನಿಖೆ ಕೈಗೊಂಡು ಕ್ರಮಕೈಗೊಳುವುದಾಗಿ ಭರವಸೆ ನೀಡಿದ್ದಾರೆ. ತನಿಖೆ ಬಳಿಕ ಸತ್ಯಾಸತ್ಯತೆ ಹೊರಬೀಳಲಿದೆ.
ವಿಸ್ಮಯ ನ್ಯೂಸ್, ಕುಮಟಾ