
ಕಾರವಾರ: ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ರಾಜ್ಯಾದ್ಯಂತ ಮುಂಗಾರಿನ ಪರಿಣಾಮ ಹೆಚ್ಚಾಗಲಿದೆ. ಜುಲೈ 5ರ ವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಜುಲೈ 5 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇದೇ ವೇಳೆ, ಮಳೆಯ ಆರ್ಭಟಕ್ಕೆ ನಲುಗಿರುವ ಕರಾವಳಿಯಲ್ಲಿ ಮತ್ತೆ ಐದು ದಿನ ಮಳೆಯ ಆರ್ಭಟ ಹೆಚ್ಚಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ಕೊಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ.
ಇಂದಿನ ಪ್ರಮುಖ ಸುದ್ದಿಗಳನ್ನು ಓದಿ: ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ:
- ಗುಣವಂತೆಯ ಶಂಭುಲಿoಗೇಶ್ವರ ದೇವರ ಮಹಾರಥೋತ್ಸವ: ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥನೆ
- ನಕಲಿ ನೋಟು ಪ್ರಕರಣ: ಮುಂಬೈನಲ್ಲಿ ಆರೋಪಿಯ ಬಂಧನ
- ಅಕ್ರಮವಾಗಿ ಗೋವು ಸಾಗಾಟ: ಓರ್ವನ ಬಂಧನ
- ಮದುವೆಗೆ ಹೋಗಿ ಬರುತ್ತೇನೆಂದು ಹೋದ ಮಹಿಳೆ ನಾಪತ್ತೆ: ಸುಳಿವು ಸಿಕ್ಕರೆ ಮಾಹಿತಿ ನೀಡುವಂತೆ ಮನವಿ
- ಸಹಭಾಗಿತ್ವದ ಶಕ್ತಿಯೊಂದಿಗೆ ಮುನ್ನಡೆಯಲಿದೆ ವಿವೇಕನಗರ ವಿಕಾಸ ಸಂಘ
ಮೇಲ್ಮೈ ಸುಳಿಗಾಳಿಯ ಪರಿಣಾಮ ಕರಾವಳಿ ಭಾಗದ ಪಶ್ಚಿಮ ಘಟ್ಟದಲ್ಲಿ ಭಾರೀ ಮಳೆಯಾಗಲಿದೆ. 40-50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಇಲಾಖೆ ಹೇಳಿದೆ. ಕರಾವಳಿಯಲ್ಲಿ ಮಳೆಯ ಆರ್ಭಟ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ವಿಸ್ಮಯ ನ್ಯೂಸ್, ಕಾರವಾರ
