Join Our

WhatsApp Group
Important
Trending

ಕಾರು – ಬೈಕ್ ಡಿಕ್ಕಿ : ಬೈಕ್ ಸವಾರನಿಗೆ ಗಾಯ:  ಲೇಡಿ, ಚಾಲಕಿ ವಿರುದ್ಧ ಕೇಸ್ ದಾಖಲು

ಅಂಕೋಲಾ: ಬೈಕಿಗೆ ಕಾರು ಡಿಕ್ಕಿ ಹೊಡೆದು ವ್ಯಕ್ತಿಯೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಪಟ್ಟಣದ ಕೆ.ಎಲ್. ಇ ರಸ್ತೆಯ ನಾಡವರ ಸಭಾ ಭವನದ ಎದುರು ಸಂಭವಿಸಿದೆ. ಅಪಘಾತದಿಂದ ಬೈಕ್ ಸವಾರ  ಜಮಗೋಡ ನಿವಾಸಿ ಗೋಪಾಲ ಸುಕ್ರು ಗೌಡ (61) ಎನ್ನುವವರ ಬಲ ಕಾಲಿಗೆ ಗಂಭೀರ ಸ್ವರೂಪದ ಗಾಯಗಳಾಗಿದೆ.

ರಾಷ್ಟ್ರೀಯ ಹೆದ್ದಾರಿ 66 ರ ಪಿಕಾಕ್ ಹೊಟೇಲ್ ಕಡೆಯಿಂದ ಅಂಕೋಲಾ ಕಡೆಗೆ ಕಾರು ಚಲಾಯಿಸಿಕೊಂಡು ಬರುತ್ತಿದ್ದ ಚಾಲಕಿ ಸೂರ್ವೆ  ನಿವಾಸಿ ರಾಜಲಕ್ಷ್ಮಿ ನಾರಾಯಣ ನಾಯಕ ಎನ್ನುವವರು ಆತಿವೇಗ ಮತ್ತು ಅಜಾಗರೂಕತೆಯಿಂದ ಕಾರು ಚಲಾಯಿಸಿ ರಸ್ತೆಯ ತಿರುವಿನಲ್ಲಿ ಕಾರು ನಿಯಂತ್ರಣ ಮಾಡಲು ಸಾಧ್ಯವಾಗದೇ ರಸ್ತೆ ಬಲಬದಿಗೆ ಬಂದು, ಅಂಕೋಲಾ ಕಡೆಯಿಂದ ರಾಷ್ಟ್ರೀಯ ಹೆದ್ದಾರಿ ಕಡೆ ಹೋಗುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು ಪ್ರಕರಣ ದಾಖಲಿಸಿಕೊಂಡ ಪೋಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Back to top button