
ಕಾರವಾರ: ಉತ್ತರಕನ್ನಡ ಸೇರಿದಂತೆ ರಾಜ್ಯದ ಕರಾವಳಿ ಭಾಗದಲ್ಲಿ ಜುಲೈ 8ರ ವರೆಗೂ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 5 ಮತ್ತು 6 ರಂದು ಮಳೆಯ ತೀವ್ರತೆ ಹೆಚ್ಚಿರುವ ಸಾಧ್ಯತೆಯಿದೆ. ಈಹಿನ್ನಲೆಯಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.
- ಅಕ್ಕನ ಅಂತಿಮ ಕಾರ್ಯ ಮುಗಿಸಿಕೊಂಡು ಮನೆಗೆ ವಾಪಸಾಗುತ್ತಿದ್ದ ತಮ್ಮನ ದುರ್ಮರಣ: ಏನಾಯ್ತು ನೋಡಿ?
- ಕೇಣಿ ವಾಣಿಜ್ಯ ಬಂದರು ವಿರೋಧಿ ಹೋರಾಟ ಸಮಿತಿಯಿಂದ ಮಹತ್ವದ ಹೇಳಿಕೆ : ಮೀನುಗಾರಿಕಾ ಮಂತ್ರಿಯಾಗಿರುವ ಜಿಲ್ಲಾ ಉಸ್ತುವಾರಿ ಸಚಿವರೇ ಖುದ್ದಾಗಿ ಬಂದು ಅಹವಾಲು ಆಲಿಸಲು ಆಗ್ರಹ
- ರೈತರಿಗೆ ಬೆಳೆವಿಮೆ ಕೊಡಿ: ಕಂಪೆನಿಗೆ ಕೇಂದ್ರದ ಖಡಕ್ ಆದೇಶ

ಅಲ್ಲದೆ, ಉತ್ತರಕನ್ನಡ ಮತ್ತು ದಕ್ಷಿಣ ಕನ್ನಡದಲ್ಲಿ ಜುಲೈ 8ರ ವರೆಗೂ ಮಳೆ ಮುಂದುವರಿಯ ಸಾಧ್ಯತೆಯಿದೆ ಎನ್ನಲಾಗಿದೆ. ಆರೇಂಜ್ ಮತ್ತು ಯಲ್ಲೊ ಅಲರ್ಟ್ ಘೋಷಣೆ ಮಾಡಿದ ಬೆನ್ನಲ್ಲೆ, ಕಡಲತೀರ ಪ್ರದೇಶದಲ್ಲಿ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಸಮುದ್ರ ತೀರ ಪ್ರದೇಶದಲ್ಲಿ ಗಾಳಿಯು ಪ್ರತಿ ಗಂಟೆಗೆ ಸುಮಾರು 50 ಕೀಲೋಮೀಟರ್ ವೇಗದಲ್ಲಿ ಬೀಸಲಿದ್ದು, ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ವಿಸ್ಮಯ ನ್ಯೂಸ್, ಕಾರವಾರ
