Focus NewsImportant
Trending
ವಿದ್ಯುತ್ ಟ್ರಾನ್ಸಫರ್ಮರ್ ಗೆ ಡಿಕ್ಕಿ ಹೊಡೆದ ಕಾರು : ಸುಟ್ಟು ಕರಕಲಾದ ಕಾರು: ಪ್ರಯಾಣಿಕರು ಗಂಭೀರ
ಪ್ರಯಾಣಿಕರು ಜೀವಪಾಯದಿಂದ ಪಾರು

ಅಂಕೋಲಾ: ರಾ.ಹೆ. 66 ರಲ್ಲಿ ತಾಲೂಕಿನ ಹಾರವಾಡಾ ರೈಲ್ವೆ ಬ್ರಿಜ್ ಬಳಿ ಕಾರೊಂದು ರಸ್ತೆ ಅಪಘಾತಕ್ಕೀಡಾಗಿದ್ದು, ಸುಟ್ಟು ಕರಕಲಾಗಿದೆ. ಬಹುಶಃ ಚಾಲಕನ ನಿಯಂತ್ರಣ ತಪ್ಪಿದ ಕಾರ್ ವಿದ್ಯುತ್ತ ಟ್ರಾನ್ಸ್ ಫರ್ಮರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರ್ ಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಅಂದಾಜಿಸಲಾಗಿದೆ. ಕಾರನಲ್ಲಿ ಐವರು ಪ್ರಯಾಣಿಕರಿದ್ದರು ಎನ್ನಲಾಗಿದ್ದು, ಕೆಲವರು ಗಂಭೀರ ಗಾಯಗೊಂಡಿದ್ದಾರೆ.
- Job: ಪ್ರತಿಷ್ಠಿತ ಗೃಹೋಪಯೋಗಿ ಮಳಿಗೆಯಲ್ಲಿ ಉದ್ಯೋಗಾವಕಾಶ: ಇಂದೇ ಸಂಪರ್ಕಿಸಿ
- ಇಸ್ರೆಲ್ ನಲ್ಲಿ ಕೆಲಸ ಮಾಡುವ ಸುವರ್ಣಾವಕಾಶ: 1 ಲಕ್ಷದ 70 ಸಾವಿರ ಸಂಬಳ
- ಏಪ್ರಿಲ್ 12 ರಂದು ಬೀನಾ ವೈದ್ಯ ಅಕ್ಷರ ಪರ್ವ ಸ್ಕಾಲರ್ ಶಿಪ್ ಪ್ರವೇಶಾತಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಪಡೆಯುವ ಸುವರ್ಣಾವಕಾಶ

ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯ ನಡೆಸಿದರು. ಪೊಲೀಸ್, ಐಆರ್ ಬಿ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಗಾಯಾಳುಗಳನ್ನು ಸ್ಥಳೀಯರ ಸಹಕಾರದಲ್ಲಿ ಆಸ್ಪತ್ರೆಗೆ ಸಾಗಿಸಲು ನೆರವಾದರು. ಅಪಘಾತಕ್ಕೆ ಸಂಬಂಧಿಸಿದಂತೆ ನಿಖರ ಮತ್ತು ಹೆಚ್ಚಿನ ಮಾಹಿತಿಗಳು ತಿಳಿದು ಬರಬೇಕಿದೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ.