
ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ಹೀಗಾಗಿ ಸುರಕ್ಷತಾ ದೃಷ್ಟಿಯಿಂದ ಶಾಲಾ – ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಲಾಗಿದೆ. ಜಿಲ್ಲಾಧಿಕಾರಿಗಳು ನಾಳೆ ಅಧಿಕೃತವಾಗಿ ರಜೆ ಘೋಷಣೆ ಮಾಡಿದ್ದಾರೆ.
- ಕಲಿಕಾ ಸಾಮಗ್ರಿ ವಿತರಣೆ ನೆಪದಲ್ಲಿ ನೆರವು ನೀಡುವುದು ಬೇಡವೇ ಬೇಡ : JSW ಕಂಪನಿ ವಿರುದ್ಧ ಮತ್ತೆ ಸ್ಥಳೀಯ ಮೀನುಗಾರರ ಆಕ್ರೋಶ
- ವಿವೇಕನಗರ ವಿಕಾಸ ಸಂಘದಿಂದ ‘ಮಾಸದ ಕಾರ್ಯಕ್ರಮ
- ಅಂಕೋಲಾ ರೂರಲ್ ರೋಟರಿ ಕ್ಲಬ್ ಅಧ್ಯಕ್ಷರಾಗಿ ಪುಷ್ಪಲತಾ ನಾಯಕ, ಕಾರ್ಯದಶಿಯಾಗಿಸದಾನಂದ ಆಯ್ಕೆ

ಉತ್ತರ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮುಂಜಾಗೃತ ಕ್ರಮವಾಗಿ ಇಂದು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಅಂತೆಯೇ ಜಿಲ್ಲೆಯಲ್ಲಿ ಗುರವಾರದ ವರೆಗೂ ಮಳೆ ಮುಂದುವರೆಯಲಿರುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಈ ನಿಟ್ಟಿನಲ್ಲಿ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜು, ಅಂಗನವಾಡಿ ಮುಂತಾದ ಶೈಕ್ಷಣಿಕ ಸಂಸ್ಥೆಗಳಿಗೆ ಬುಧವಾರದಂದು ರಜೆ ಘೋಷಿಸಿ ಉತ್ತರ ಕನ್ನಡ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ವಿಸ್ಮಯ ನ್ಯೂಸ್, ಕಾರವಾರ