Focus News
Trending
ಕಸ್ಟಮ್ಸ್ ಅಧಿಕಾರಿ ಎಂದು ಹೇಳಿ ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಟೋಪಿ: ಖತರ್ನಾಕ್ ಆರೋಪಿ ಬಂಧನ

ಶಿರಸಿ: ಜನರನ್ನು ನಂಬಿಸಿ ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಟೋಪಿ ಹಾಕಿ, ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸುತ್ತಿದ್ದ ಆರೋಪಿಯನ್ನು ಶಿರಸಿ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈತ ತಾನು ಹುಬ್ಬಳ್ಳಿ ಕಸ್ಟಮ್ ವಿಭಾಗದ ಅಧಿಕಾರಿ ಎಂದು ಸಾರ್ವಜನಿಕರಿಗೆ ಸುಳ್ಳು ಹೇಳಿ ವಂಚಿಸುತ್ತಿದ್ದ.
- ಸಾನ್ವಿ ಸ್ಕಿನ್ ಮತ್ತು ಲೇಸರ್ ಸೆಂಟರ್ ನಲ್ಲಿ ಉಚಿತ ಪಿಸಿಯೋಥೆರಪಿ ಶಿಬಿರ
- ಮೇ 21ರ ವರೆಗೆ ರೆಡ್ ಅಲರ್ಟ್ ಘೋಷಣೆ: ಭಾರೀ ಮಳೆಯ ಮುನ್ನೆಚ್ಚರಿಕೆ

ಕುಂದಾಪುರದ ಮನೋಜ್ ನರಸಿಂಹ ಪೂಜಾರಿ ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ಈತನ ಕುರಿತು ಸುಮಾರು 7,70,000 ರೂಪಾಯಿಗಳನ್ನು ಪಡೆದು ಮೋಸ ಮಾಡಿದ ಬಗ್ಗೆ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ವಿಸ್ಮಯ ನ್ಯೂಸ್ ಶಿರಸಿ
