ಕಾರವಾರ: ಮನೆಗೆ ಆಗಮಿಸಿದ್ದ ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದನ್ನು ರಕ್ಷಣೆ ಮಾಡಿದ ಘಟನೆ ತಾಲೂಕಿನ ಗೋಟೆಗಾಳಿ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಗೋಟೆಗಾಳಿಯ ವಾಸು ಪೆಡೇಕರ್ ಎಂಬುವವರ ಮನೆಯ ಬಳಿ ಕಾಳಿಂಗ ಸರ್ಪವು ಕಾಣಿಸಿಕೊಂಡಿತ್ತು. ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ನೋಡಿ ಮನೆಯವರು ಆತಂಕಗೊoಡಿದ್ದರು. ಈ ಕಾಳಿಂಗ ಸರ್ಪ ಸುಮಾರು 12 ಅಡಿಗೂ ಅಧಿಕ ಉದ್ದವಿದೆ.
- ಅಂಕೋಲಾ ಪುರಸಭೆಯ ವಾರ್ಡ್ ನಂ 14ಕ್ಕೆ ನವೆಂಬರ್ 23 ರಂದು ಉಪಚುನಾವಣೆ
- ರಸ್ತೆಗೆ ಅಡ್ಡಲಾಗಿ ಬಂದ ದನ ತಪ್ಪಿಸಲು ಹೋಗಿ ಅಪಘಾತ: ಬೈಕ್ ಸವಾರ ಸಾವು
ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಸಿಬ್ಬಂದಿ ರಕ್ಷಣಾ ಕಾರ್ಯ ನಡೆಸಿದ್ದಾರೆ. ಕಾಳಿಂಗ ಸರ್ಪವು ರಕ್ಷಣಾ ಕಾರ್ಯಾಚರಣೆ ವೇಳೆ ಗಿಡಗಳ ನಡುವೆ, ಪೊದೆಗಳಲ್ಲಿ ಅಡಗಿಕೊಳ್ಳಲು ಮುಂದಾಗುತ್ತಿತ್ತು. ಕೊನೆಗೂ ಹರಸಾಹಸಪಟ್ಟು ಅರಣ್ಯ ಇಲಾಖೆ ಸಿಬ್ಬಂದಿಗಳು ಯಶಸ್ವಿ ಕಾರ್ಯಾಚರಣೆ ನಡೆಸಿದ್ದಾರೆ.
ವಿಸ್ಮಯ ನ್ಯೂಸ್, ಕಾರವಾರ