
ಕಾರವಾರ: ಉತ್ತರ ಕನ್ನಡದ ಕರಾವಳಿ ಭಾಗದ ತಾಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ಮತ್ತು ಘಟ್ಟದ ಮೇಲಿನ ತಾಲೂಕುಗಳಾದ ಶಿರಸಿ, ಸಿದ್ದಾಪುರ ಹಾಗೂ ಜೋಯಿಡಾ ತಾಲೂಕಿನ ಎಲ್ಲಾ ಶಾಲಾ-ಕಾಲೇಜು, ಅಂಗನವಾಡಿ ಮುಂತಾದ ಶೈಕ್ಷಣಿಕ ಸಂಸ್ಥೆಗಳಿಗೆ ನಾಳೆ ಶುಕ್ರವಾರ (ಜುಲೈ 8) ರಂದು ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
- ಸಾನ್ವಿ ಸ್ಕಿನ್ ಮತ್ತು ಲೇಸರ್ ಸೆಂಟರ್ ನಲ್ಲಿ ಉಚಿತ ಪಿಸಿಯೋಥೆರಪಿ ಶಿಬಿರ
- ಮೇ 21ರ ವರೆಗೆ ರೆಡ್ ಅಲರ್ಟ್ ಘೋಷಣೆ: ಭಾರೀ ಮಳೆಯ ಮುನ್ನೆಚ್ಚರಿಕೆ
- ಮಹಿಳಾ ರಿಸೆಪ್ಯನಿಸ್ಟ್ ಬೇಕಾಗಿದ್ದಾರೆ: ವಸತಿ ಸೌಲಭ್ಯ, ಆಕರ್ಷಕ ಸಂಬಳ
ಶಾಲಾ ಮಕ್ಕಳ ಹಿತದೃಷ್ಟಿಯಿಂದ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 34(ಎಮ್) ರಡಿ ಜಿಲ್ಲಾಧಿಕಾರಿ ಹಾಗೂ ಅಧ್ಯಕ್ಷರು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ರವರಿಗೆ ಪ್ರದತ್ತವಾದ ಅಧಿಕಾರದ ಮೇರೆಗೆ ಸದ್ರಿ ತಾಲೂಕಿನ ಎಲ್ಲಾ ಶಾಲಾ-ಕಾಲೇಜು, ಅಂಗನವಾಡಿ ಮುಂತಾದ ಶೈಕ್ಷಣಿಕ ಸಂಸ್ಥೆಗಳಿಗೆ 08-07-2022 ರಂದು ರಜೆ ಘೋಷಣೆ ಮಾಡಲಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ 08-07-2022 ರ ಬೆಳಿಗ್ಗೆ 08-30 ಗಂಟೆಯಿಂದ ದಿನಾಂಕ: 09-07-2022 ರ ಬೆಳಿಗ್ಗೆ 08-30 ರವರೆಗೆ ಭಾರಿ ಮಳೆಯಾಗುವ ಸೂಚನೆ (ಆರೆಂಜ್ ಅಲರ್ಟ್ )ನ್ನು ನೀಡಲಾದ ಹಿನ್ನಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ.
ವಿಸ್ಮಯ ನ್ಯೂಸ್ ಕಾರವಾರ
