ಶಿರಸಿ: ಸಂಸದ ಅನಂತಕುಮಾರ ಹೆಗಡೆ ಜುಲೈ 11ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಸಂಬoಧಿಸಿದoತೆ ಅಧಿಕಾರಿಗಳ ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಇತ್ತಿಚೆಗೆ ನಡೆದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸಭೆಯಲ್ಲಿ ನಿಧಾನಗತಿ ಕಾಮಗಾರಿ ಹಾಗೂ ಕೆಲವು ಲೋಪದೋಷಗಳನ್ನು ಸರಿಪಡಿಸದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸಂಸದರು, ಕಠಿಣವಾದ ನಿರ್ಣಯಗಳನ್ನು ತೆಗೆದುಕೊಳ್ಳುವಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸಾಧ್ಯವಾಗಿರಲಿಲ್ಲ.
ಕಾಮಗಾರಿಗೆ ಸಂಬoಧಿಸಿದoತೆ ತಾಂತ್ರಿಕ ಸಮಸ್ಯೆ ಹಾಗೂ ಕೆಲಸಕ್ಕೆ ಅಡಚಣೆಯಾಗುವ ಅಂಶಗಳನ್ನು ಗುರುತಿಸಿ ಅವುಗಳ ಬಗ್ಗೆ ಚರ್ಚಿಸಿ ನಿರ್ಣಯ ತೆಗೆದುಕೊಳ್ಳಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿಗಳನ್ನು ಜಿಲ್ಲೆಗೆ ಕರೆಯಿಸಿ ಅವರ ಸಮ್ಮುಖದಲ್ಲಿ ಸಭೆ ನಡೆಸುವುದಾಗಿ ತಿಳಿಸಿದ್ದರು.
ಈ ಸಭೆಯಲ್ಲಿ ಜಿಲ್ಲೆಯಲ್ಲಿ ಹಾದು ಹೋಗುವ ಗೋವಾ ಗಡಿಯಿಂದ-ಮoಗಳೂರು ರಾಷ್ಟ್ರೀಯ ಹೆದ್ದಾರಿ ಜೊತೆಗೆ ರಾಮನಗರ-ಗೋವಾ ರಾಷ್ಟ್ರೀಯ ಹೆದ್ದಾರಿ, ಶಿರಸಿ-ಕುಮಟಾ ರಾಷ್ಟ್ರೀಯ ಹೆದ್ದಾರಿ, ಶಿರಸಿ-ಹಾವೇರಿ ರಾಷ್ಟ್ರೀಯ ಹೆದ್ದಾರಿ ಇವುಗಳ ಬಗ್ಗೆಯೂ ಚರ್ಚೆ ನಡೆಯಲಿದೆ.
ವಿಸ್ಮಯ ನ್ಯೂಸ್, ಶಿರಸಿ