ಕಾರವಾರ: ಜಿಲ್ಲೆಯಲ್ಲಿ ಮಳೆಯ ಪ್ರಮಾಣ ತಗ್ಗಿದೆ. ಹೀಗಾಗಿ ಜುಲೈ 11 ಸೋಮವಾರದಿಂದ ಶಾಲಾ ಕಾಲೇಜುಗಳು ಎಂದಿನoತೆ ಕಾರ್ಯ ನಿರ್ವಹಿಸಲಿವೆ. ಯಾವುದೇ ಶಾಲಾ – ಕಾಲೇಜುಗಳಿಗೆ ರಜೆ ಇರುವುದಿಲ್ಲ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.
ಆದರೆ, ಮಕ್ಕಳ ಹಿತದೃಷ್ಟಿಯನ್ನು ಗಮನದಲ್ಲಿ ಇಟ್ಟುಕೊಂಡು ಅವಶ್ಯಕತೆ ಬಿದ್ದಲ್ಲಿ ಮಳೆಯ ಪ್ರಮಾಣವನ್ನು ಆಧರಿಸಿ, ರಜೆ ಘೋಷಣೆ ಮಾಡುವ ಅಧಿಕಾರವನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ತಹಶೀಲ್ದಾರ್ ವಿವೇಚನೆಗೆ ಬಿಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ವಿಸ್ಮಯ ನ್ಯೂಸ್, ಕಾರವಾರ