ಯಲ್ಲಾಪುರ: ಹಿಂಸಾತ್ಮಕ ರೀತಿಯಲ್ಲಿ ಯಾವುದೇ ಪರವಾನಗಿ ಇಲ್ಲದೆ ಒಂಟೆಗಳ ಸಾಗಾಟ ಮಾಡುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ ಘಟನೆ ಇಲ್ಲಿನ ತಾಲೂಕಿನ ಜೋಡಿಕೆರೆ ಚೆಕ್ಪೋಸ್ಟ್ ಬಳಿ ನಡೆದಿದೆ. ಆರೋಪಿಗಳು ಅಂದಾಜು 3 ಲಕ್ಷ ಮೌಲ್ಯದ ಒಂಟೆ ಸಾಗಾಟ ಮಾಡುತಿದ್ದರು.
ಬಂಧಿತರನ್ನ ಕಾಂತೇಶ್, ಪ್ರಕಾಶ್, ಈಶ್ವರಪ್ಪ ಎಂದು ಗುರುತಿಸಲಾಗಿದೆ. ಬಂಧಿತರುಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಶಿಡೇನೂರು ಗ್ರಾಮದವರು ಎಂಬ ಮಾಹಿತಿ ಸಿಕ್ಕಿದೆ. ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಸ್ಮಯ ನ್ಯೂಸ್ ಯಲ್ಲಾಪುರ