
ಯಲ್ಲಾಪುರ: ತಾಲೂಕಿನಲ್ಲಿ ಸುರಿದ ಭಾರೀ ಗಾಳಿ ಮಳೆ ಹಲವೆಡೆ ಅವಾಂತರವನ್ನು ಸೃಷ್ಟಿಸಿದೆ. ಹಲವೆಡೆ ಮರ ಬಿದ್ದು ಮನೆ ಕುಸಿದು ಹಾನಿಯಾಗಿದೆ. ಇಲ್ಲಿನ ಇಡಗುಂದಿ ಗ್ರಾ.ಪಂ ವ್ಯಾಪ್ತಿಯ ಲಿಂಗದಬೈಲಿನಲ್ಲಿ ಶ್ಯಾಮಲಾ ಬಾಬು ಮರಾಠಿ ಅವರ ಮನೆಯ ಮೇಲೆ ಮರ ಬಿದ್ದು ಅಪಾರ ಹಾನಿಯಾಗಿದೆ. ಅದೇ ರೀತಿ, ಹಾಸಣಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾದನಸರದಲ್ಲಿ , ಚಂದಗುಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಹಸ್ರಳ್ಳಿ ಗ್ರಾಮದ ಕೋಲಿಬೇಣದಲ್ಲಿ ಮನೆ ಕುಸಿದಿದೆ. ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಹಾನಿ ಪರಿಶೀಲಿಸಿದ್ದಾರೆ.
ವಿಸ್ಮಯ ನ್ಯೂಸ್, ಕಾರವಾರ