ವಿದ್ಯುತ್ ಟ್ರಾನ್ಸಫಾರ್ಮರ್ ಗೆ ಡಿಕ್ಕಿ : ರಸ್ತೆಯಲ್ಲೇ ಪಲ್ಟಿಯಾದ ಲಾರಿ

ಹೊನ್ನಾವರ : ಪಟ್ಟಣದ ಗೇರುಸೊಪ್ಪಾ ಸರ್ಕಲ್ ಸಮೀಪ ಲಾರಿ ಪಲ್ಟಿಯಾಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪಟ್ಟಣದಲ್ಲಿ ವಿದ್ಯುತ್ ವ್ಯತಯ ಉಂಟಾಗಿತ್ತು. ಹೌದು, ಸಕ್ಕರೆ ತುಂಬಿದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಹೊನ್ನಾವರ ಪಟ್ಟಣದ ಗೇರುಸೊಪ್ಪ ಸರ್ಕಲ್ ಬಳಿ ನಡೆದಿದೆ. ಮಹಾರಾಷ್ಟ್ರ ದಿಂದ ಸಕ್ಕರೆ ತುಂಬಿಕೊoಡು ಮಂಗಳೂರು ಕಡೆಗೆ ಸಾಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ ಎನ್ನಲಾಗಿದೆ. ನಿಯಂತ್ರಣ ತಪ್ಪಿದ ಲಾರಿಯು ಗೇರುಸೊಪ್ಪ ತಿರುವಿನಲ್ಲಿರುವ ವಿದ್ಯುತ್ ಟ್ರಾನ್ಸಫಾರ್ಮರ್ ಗೆ ಡಿಕ್ಕಿ ಹೊಡೆದಿದ್ದು, ಒಂದು ವಿದ್ಯುತ್ ಕಂಬ ಮುರಿದು ಬಿದ್ದಿದ್ದು, ಟ್ರಾನ್ಸ್ಫಾರ್ಮರ್ ಸುಟ್ಟುಹೋಗಿದೆ. ಅಪಘಾತದಲ್ಲಿ ಚಾಲಕ ಮತ್ತು ನಿರ್ವಾಹಕನಿಗೆ ಸಣ್ಣಪುಟ್ಟ ಗಾಯವಾಗಿದೆ.

ಸಕ್ಕರೆ ಚೀಲಗಳನ್ನು ಬೇರೆ ಲಾರಿಗೆ ಸ್ಥಳಾಂತರಿಸಲಾಗಿದೆ. ಮಾಡಲಾಗಿದೆ. ಕ್ರೇನ್ ಮೂಲಕ ಲಾರಿ ತೆರವು ಮಾಡುವ ಮೂಲಕ ರಸ್ತೆ ಸಂಚಾರ ಸುಗಮಗೊಳಿಸಲಾಗಿದೆ, ಈ ಸ್ಥಳದಲ್ಲಿ ಪದೆ ವಾಹನ ಪಲ್ಟಿಯಾಗಿರುತ್ತಿರುವುದಕ್ಕೆ ಐಆರ್ ಬಿ ಕಂಪನಿಯ ಅವೈಜ್ಞಾನಿಕ ಕಾಮಗಾರಿಯೆ ಕಾರಣ ಎಂದು ಹೇಳಲಾಗುತ್ತಿದೆ.

ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ

Exit mobile version