Focus NewsImportant
Trending

ಜಿಲ್ಲಾದ್ಯಂತ ಜುಲೈ 19ರವರೆಗೆ ಭಾರೀ ಮಳೆ ಬೀಳುವ ಸೂಚನೆ: ಜಿಲ್ಲಾಡಳಿತದ ಪ್ರಕಟಣೆಯಲ್ಲಿ ಏನಿದೆ‌ ನೋಡಿ?

ತುರ್ತು ಸಹಾಯವಾಣಿ ಸಂಖ್ಯೆ ಇಲ್ಲಿದೆ ನೋಡಿ

ಕಾರವಾರ: ಉತ್ತರಕನ್ನಡ‌‌ ಜಿಲ್ಲೆಯಲ್ಲಿ ಮಳೆಯಬ್ಬರ ಮುಂದುವರಿದಿದ್ದು, ಜಿಲ್ಲಾದ್ಯಂತ ಜುಲೈ 19ರವರೆಗೆ ಭಾರೀ ಮಳೆ ಬೀಳುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.

ಭಾರೀ ಮಳೆಯ ಮುನ್ಸೂಚನೆಯ ಹಿನ್ನಲೆಯಲ್ಲಿ ಸಾರ್ವಜನಿಕರು ಹಾಗೂ ಪ್ರವಾಸಿಗರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಮಳೆ ಗಾಳಿ ಬೀಸುವ ಸಂದರ್ಭದಲ್ಲಿ ಮಕ್ಕಳು, ಸಾರ್ವಜನಿಕರು ಅಪಾಯಕಾರಿ ವಿದ್ಯುತ್ ಕಂಬ, ಕಟ್ಟಡ, ಮರಗಳ ಹತ್ತಿರ ಹಾಗೂ ಕೆಳಗೆ ನಿಲ್ಲದೇ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಬೇಕು. ಪ್ರಕೃತಿ ವಿಕೋಪ ಸಂಬಂಧಿತ ಯಾವುದೇ ಸಮಸ್ಯೆಗಳಿಗೆ ತುರ್ತು ಸೇವೆ ಟೋಲ್ ಫ್ರೀ ಸಂಖ್ಯೆ 1077, ಲ್ಯಾಂಡ್‌ಲೈನ್‌ಸಂಖ್ಯೆ: 08382- 229 857 ಮತ್ತು ವಾಟ್ಸಾಪ್ ಸಂಖ್ಯೆ: 94835 11015ಗೆ ಸಂಪರ್ಕಿಸಬಹುದು ಎಂದು ಜಿಲ್ಲಾಡಳಿತ‌ ಪ್ರಕಟಣೆಯಲ್ಲಿ ತಿಳಿಸಿದೆ.

ವಿಸ್ಮಯ ನ್ಯೂಸ್ ಕಾರವಾರ

Back to top button