Follow Us On

WhatsApp Group
Important
Trending

ಉಕ್ಕಿ ಹರಿಯುತ್ತಿರುವ ಗುಂಡಬಾಳ ನದಿ: ಪ್ರವಾಹ ಪರಿಸ್ಥಿತಿ: ಸುರಕ್ಷಿತ ಪ್ರದೇಶಕ್ಕೆ ಜನರ ಸ್ಥಳಾಂತರ

ಹೊನ್ನಾವರ: ಉತ್ತರಕನ್ನಡ ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಹಲವೆಡೆ ನದಿಗಳು ಉಕ್ಕಿ ಹರಿಯುತ್ತಿದ್ದು ಪ್ರವಾಹ ಪರಿಸ್ಥಿತಿ ಎದುರಾಗಿದೆ. ರಾತ್ರಿಯಿಂದ ನಿರಂತರವಾಗಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಹೊನ್ನಾವರದ ಗುಂಡಬಾಳ ನದಿಗೆ ಪ್ರವಾಹ ಬಂದಿದ್ದು, 32ಕ್ಕೂ ಕುಟುಂಬಗಳು ಅಪಾಯದಲ್ಲಿವೆ.

ಈಗಾಗಲೇ ಅವರೆಲ್ಲರನ್ನೂ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗುತ್ತಿದೆ. 68 ಮಂದಿ ಯನ್ನು ಈಗಾಗಲೇ ಸುರಕ್ಷಿತ ಸ್ಥಳ ಕ್ಕೆ ಸ್ಥಳಾಂತರಿಸಲಾಗಿದೆ. ಎಸ್ ಡಿಆರ್ ಎಫ್ ತಂಡ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದು, ಚಿಕ್ಕನಕೋಡ, ಕೆಕ್ಕಾರ ಮತ್ತು ಹೊಸಾಕುಳಿ, ಮಾಡಗೇರಿ ಗ್ರಾಮಗಳು ಜಲಾವೃತವಾಗುವ ಭೀತಿ ಎದುರಿಸುತ್ತವೆ.

ವಿಸ್ಮಯ ನ್ಯೂಸ್, ಹೊನ್ನಾವರ

Back to top button